ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್ಎಸ್‌ ಸಭೆಯಲ್ಲಿ ರಾಜಕೀಯ ಚರ್ಚೆ ಇಲ್ಲ: ಅರುಣಜೀ

Last Updated 31 ಆಗಸ್ಟ್ 2018, 15:25 IST
ಅಕ್ಷರ ಗಾತ್ರ

ರಾಯಚೂರು: ಮಂತ್ರಾಲಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೇತೃತ್ವದಲ್ಲಿ ಪರಿವಾರಸಂಘಟನೆಗಳ ಅಖಿಲ ಭಾರತ ಸಮನ್ವಯ ಸಭೆ ಶುಕ್ರವಾರ ಆರಂಭಗೊಂಡಿತು.

ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಅಮಿತ್‌ ಶಾ ಪಾಲ್ಗೊಂಡಿದ್ದಾರೆ.

‘ಆರ್‌ಎಸ್‌ಎಸ್‌ ಪರಿವಾರ ಸಂಘಟನೆಗಳ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಸಂಘಟನಾ ಪ್ರಮುಖರು ಸೇರಿ 200 ಜನ ಭಾಗವಹಿಸಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಅವರಿಗಾದ ಅನುಭವ ಹಂಚಿಕೊಳ್ಳುವುದು ಸಭೆಯ ಉದ್ದೇಶ’ ಎಂದುಆರ್‌ಎಸ್‌ಎಸ್‌ ರಾಷ್ಟ್ರೀಯ ಪ್ರಚಾರಕ ಅರುಣಜೀ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಪ್ರತಿ ವರ್ಷ ಜನವರಿ ಮತ್ತು ಸೆಪ್ಟೆಂಬರ್‌ನಲ್ಲಿ ಸಮನ್ವಯ ಸಮಿತಿ ಸಭೆ ನಡೆಸುವುದು ಪರಂಪರೆಯಾಗಿದೆ. ಸಭೆಯಲ್ಲಿ ಯಾವುದೇ ನಿರ್ಣಯ ಕೈಗೊಳ್ಳುವುದಿಲ್ಲ. ರಾಜಕೀಯ ವಿಷಯ ಚರ್ಚಿಸುವುದಿಲ್ಲ’ ಎಂದು ಹೇಳಿದರು. ಮಾಧ್ಯಮದವರ ಯಾವುದೇ ಪ್ರಶ್ನೆಗೆ ಅವರು ಉತ್ತರಿಸಲಿಲ್ಲ.

ಅಮಿತ್‌ ಶಾ ಮತ್ತು ಮೋಹನ್‌ ಭಾಗವತ್‌ ಭೇಟಿಗೆ ಮಾಧ್ಯಮದವರಿಗೆ ಅವಕಾಶ ನೀಡಲಿಲ್ಲ. ಸಭೆ ನಡೆದಿರುವ ಸ್ಥಳದಿಂದ ದೂರವಿರುವ ಕಟ್ಟಡದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT