ಸೋಮವಾರ, ಜೂಲೈ 6, 2020
22 °C
ಜಿಲ್ಲೆಯಲ್ಲಿ ಒಟ್ಟು 146 ಕ್ವಾರಂಟೈನ್‌ ಕೇಂದ್ರಗಳನ್ನು ತೆರೆಯಲಾಗಿದೆ

ಕೊರೊನಾ: ಯಾವುದೇ ಪಾಸಿಟಿವ್ ಪ್ರಕರಣವಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಕಳೆದ ಎರಡು ದಿನಗಳಲ್ಲಿ ಬಂದಿರುವ ಕೋವಿಡ್‌ ಪರೀಕ್ಷಾ ವರದಿಗಳಲ್ಲಿ ಜಿಲ್ಲೆಯಲ್ಲಿ ಯಾವುದೇ ಪಾಸಿಟಿವ್‌ ಕಂಡುಬಂದಿಲ್ಲ. ಸೋಮವಾರ ಹೊಸದಾಗಿ 831 ಜನರ ಗಂಟಲು ದ್ರುವ ಸ್ಯಾಂಪಲ್‌ಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ.

ಈ ಸ್ಯಾಂಪಲ್‌ಗಳನ್ನು ದೇವದುರ್ಗ ತಾಲ್ಲೂಕಿನಿಂದ 276, ಲಿಂಗಸುಗೂರು ತಾಲ್ಲೂಕಿನಿಂದ 57, ಮಾನ್ವಿ ತಾಲ್ಲೂಕಿನಿಂದ 152, ಸಿಂಧನೂರು ತಾಲ್ಲೂಕಿನಿಂದ 16 ಮತ್ತು ರಾಯಚೂರು ತಾಲ್ಲೂಕಿನಿಂದ 330 ಕೋವಿಡ್-19 ಶಂಕೆ ಹಿನ್ನೆಲೆಯಲ್ಲಿ ವರದಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಈಗಾಗಲೇ ಕಳುಹಿಸಲಾಗಿದ್ದ ಫಲಿತಾಂಶಗಳಲ್ಲಿ ಎರಡು ದಿನಗಳಲ್ಲಿ 496 ನೆಗೆಟಿವ್ ವರದಿಗಳು ಬಂದಿವೆ. ಒಟ್ಟಾರೆ ಜಿಲ್ಲೆಯಿಂದ ಇದೂವರೆಗೆ 11,329 ಜನರ ಗಂಟಲಿನ ದ್ರವ್ಯ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವುಗಳಲ್ಲಿ 6,374 ವರದಿಗಳು ನೆಗೆಟಿವ್ ಆಗಿವೆ. ರೋಗ ಲಕ್ಷಣಗಳಿಲ್ಲದ ಕಾರಣ 6 ವರದಿಗಳು ತಿರಸ್ಕೃತಗೊಂಡಿವೆ ಮತ್ತು ಇನ್ನೂ 4,883 ಸ್ಯಾಂಪಲ್‌ಗಳ ಫಲಿತಾಂಶ ಬರಬೇಕಿದೆ.

ಕ್ವಾರಂಟೈನ್‌ ಸಂಖ್ಯೆ ಏರಿಕೆ: ಎರಡು ದಿನಗಳಲ್ಲಿ ಮತ್ತೆ ಜನರು ಹೊರರಾಜ್ಯಗಳಿಂದ ಬಂದಿದ್ದು, ಇದುವರೆಗೂ ಒಟ್ಟು 10,080 ಜನರನ್ನು ಸಾಂಸ್ಥಿಕ ಕ್ವಾರಂಟೈನ್‌ಗಳಲ್ಲಿ ಉಳಿಸಲಾಗಿದೆ.

ರಾಯಚೂರು ತಾಲ್ಲೂಕಿನ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ 5,107, ಸಿಂಧನೂರು ತಾಲ್ಲೂಕಿನ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ 489, ಮಾನ್ವಿ ತಾಲ್ಲೂಕಿನ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ 1,589, ದೇವದುರ್ಗ ತಾಲ್ಲೂಕಿನ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ 1,871 ಹಾಗೂ ಲಿಂಗಸೂಗೂರು ತಾಲ್ಲೂಕಿನ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ 1,೦24 ಜನರು ಇದ್ದಾರೆ. ಇದೂವರೆಗೂ 1,061 ಜನರನ್ನು ಬಿಡುಗಡೆ ಮಾಡಲಾಗಿದೆ.

ಸವಾಲಾದ ಸಹಜ ಜೀವನ: ಜಿಲ್ಲೆಯಲ್ಲಿ ಎರಡು ದಿನಗಳಿಂದ ಪಾಸಿಟಿವ್‌ ಪ್ರಕರಣಗಳು ಕಂಡುಬಂದಿಲ್ಲ. ಆದರೆ, 66 ಕೋವಿಡ್‌ ಸೋಂಕಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೊಂದಿಗೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್‌ ಕೇಂದ್ರಗಳಲ್ಲಿ ಇರಿಸಲಾಗಿದೆ. ಜಿಲ್ಲೆಯ ಜನರು ಸಹಜ ಜೀವನ ನಡೆಸುವುದು ಸವಾಲಾಗಿ ಪರಿಣಮಿಸಿದೆ.

ಲಾಕ್‌ಡೌನ್‌ ಸಡಿಲಿಕೆ ಮಾಡಿರುವುದು ಸಹಜ ಜೀವನ ನಡೆಸುವುದಕ್ಕೆ ಪೂರಕವಾಗಿದ್ದರೂ, ಜನದಟ್ಟಣೆ ಹೆಚ್ಚಳಕ್ಕೆ ಇದೇ ಕಾರಣವಾಗಿ ಮಾರಕವಾಗಬಹುದು ಎನ್ನುವ ಆತಂಕವನ್ನು ಪ್ರಜ್ಞಾವಂತರು ವ್ಯಕ್ತಪಡಿಸುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.