ಮಂಗಳವಾರ, ಮಾರ್ಚ್ 28, 2023
31 °C

ಸಿಂಧನೂರಿನಿಂದ ಸ್ಪರ್ಧಿಸುವರೇ ಜನಾರ್ದನ ರೆಡ್ಡಿ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂಧನೂರು: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಿಂಧನೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ’ ಎಂದು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೇಳಿದರು.

ತಾಲ್ಲೂಕಿನ ಗಾಂಧಿನಗರದಲ್ಲಿ ಭಾನುವಾರ ನಡೆದ ಲಕ್ಷ ನರ್ಮದ ಲಿಂಗ ಸಹಿತ ಆತ್ಮಲಿಂಗ ಪ್ರತಿಷ್ಠಾಪನಾ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ‘ಸಿಂಧನೂರಿನಲ್ಲಿ ನನಗೆ ಸಾಕಷ್ಟು ಗೆಳೆಯರಿದ್ದಾರೆ. ರಾಜಕೀಯ ಉದ್ದೇಶದಿಂದ ಪ್ರವಾಸ ಮಾಡುತ್ತಿಲ್ಲ. ಚುನಾವಣೆ ಬಗ್ಗೆ ನಿರ್ಧರಿಸಿಲ್ಲ. ವರಿಷ್ಠರು ಒತ್ತಡ ಹೇರಿ, ಟಿಕೆಟ್ ನೀಡಿದರೆ ಆಗ ಯೋಚಿಸುವೆ’ ಎಂದರು.

‘ಸಿಂಧನೂರು ವಿಧಾನಸಭಾ ಕ್ಷೇತ್ರ ದಿಂದ ನಾನು ಸ್ಪರ್ಧಿಸುವ ಕುರಿತು ಮಾಧ್ಯಮಗಳ ವರದಿ ಗಮನಿಸಿದ್ದೇನೆ. ಈ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳುವರು. ಪಕ್ಷದ ಮುಖಂಡರು ಯಾರಿಗೆ ಟಿಕೆಟ್ ನೀಡುವುರೋ, ಅವರನ್ನು ಗೌರವಿಸುವೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು