ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಎಸ್‌ಎಸ್‌ನಿಂದ ಸೇವಾ ಮನೋಭಾವನೆ

ಎಸ್‌ಎಸ್‌ಎಂ ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸ್ ರಾಯಚೂರಕರ್ ಅಭಿಮತ
Last Updated 23 ಜುಲೈ 2022, 13:45 IST
ಅಕ್ಷರ ಗಾತ್ರ

ರಾಯಚೂರು: ರಾಷ್ಟ್ರೀಯ ಸೇವಾ ಯೋಜನೆಯಿಂದ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಹೆಚ್ಚಿಸುತ್ತದೆ ಎಂದು ಎಸ್‌ಎಸ್‌ಎಂ ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸ್ ರಾಯಚೂರಕರ್ ಅಭಿ‍ಪ್ರಾಯಪಟ್ಟರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾಷಾನಿಕಾಯ, ಸಾಂಸ್ಕೃತಿಕ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಸೆಲ್ಫ್ , ಐಕ್ಯೂಎಸಿ ವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶನಿವಾರ ವಿಶೇಷ ಉಪನ್ಯಾಸ ನೀಡಿದರು.

ಸಮಾಜಕ್ಕಾಗಿ, ದೇಶಕ್ಕಾಗಿ ಮಾಡುವಂತಹ ಒಳ್ಳೆಯ ಕೆಲಸಗಳು ಸೇವಾ ಮನೋಭಾವನೆಯನ್ನು ಹೆಚ್ಚಿಸುತ್ತವೆ. ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿಗಳ ಜೊತೆ ಒಳ್ಳೆಯ ರೀತಿಯಿಂದ ಸಹಕರಿಸಿದರೆ ಸುತ್ತಮುತ್ತಲಿನ ಪರಿಸರವು ಸ್ವಚ್ಛವಾಗಿ ಇಟ್ಟುಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಎನ್ ಎಸ್ಎಸ್ ತರಬೇತಿ ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ಪರಿಸರ ಜ್ಞಾನ, ಕಾಳಜಿ, ರಕ್ತದಾನ, ಸೇವಾಮನೋಭಾವನೆ ಮೂಡಿಸುತ್ತದೆ ಎಂದು ತಿಳಿಸಿದರು.

ವಿಶೇಷ ಉಪನ್ಯಾಸಕ ಮಲ್ಲರೆಡ್ಯಪ್ಪ ಮಾತನಾಡಿ, ಪಂಡಿತ್ ತಾರಾನಾಥರಿಂದ ದೇಶಪಾಂಡೆವರೆಗೆ ಅನೇಕರು ತಮ್ಮದೇ ಆದ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇದು ನಾವು ಹೆಮ್ಮೆ ಪಡುವಂತಹ ವಿಷಯ ಎಂದು ಹೇಳಿದರು.

ಪ್ರಾಧ್ಯಾಪಕ ಡಾ.ಪ್ರಾಣೇಶ ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿಗಳು ಅಂದಿನ ಕೆಲಸವನ್ನು ಅಂದೆ ಮಾಡಿ ಮುಗಿಸಬೇಕು. ರಾಷ್ಟ್ರೀಯ ಸೇವಾ ಯೋಜನೆ ನಮಗೆ ಒದಗಿ ಬಂದ ಒಂದು ಸುವರ್ಣ ಅವಕಾಶವೆಂದು ಕಾರ್ಯ ಗತರಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಯಂಕಣ್ಣ ಮಾತನಾಡಿದರು. ಮಲ್ಲನಗೌಡ, ಹನುಮಂತ ಕೊರಪುರ, ಮಹಾಂತೇಶ ಅಂಗಡಿ ಡಾ. ಶಿವಯ್ಯ ಹಿರೇಮಠ, ಮಹಾದೇವಪ್ಪಉಪನ್ಯಾಸಕರಾದ ಹನುಮಂತ, ಪುಷ್ಪಾವತಿ, ಗುರಪ್ಪಇದ್ದರು.

ಭೂಮಿಕಾ ಪ್ರಾರ್ಥಿಸಿದರು. ಮಹಾದೇವಪ್ಪ ನಿರೂಪಿಸಿದರು. ಮಹಾಂತೇಶ ಅಂಗಡಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT