ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬ್ಬಂದಿ ದಾಳಿ: ಪ್ಲಾಸ್ಟಿಕ್ ವಸ್ತು ವಶ

Last Updated 7 ಜುಲೈ 2022, 5:03 IST
ಅಕ್ಷರ ಗಾತ್ರ

ಸಿರವಾರ: ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಅಂಗಡಿಗಳ ಮೇಲೆ ಪಟ್ಟಣ ಪಂಚಾಯಿತಿ ಸಿಬ್ಬಂದಿ ಬುಧವಾರ ದಾಳಿ ನಡೆಸಿ ಏಕ ಬಳಕೆಯ ಪ್ಲಾಸ್ಟಿಕ್ ಚೀಲಗಳನ್ನು ವಶಪಡಿಸಿಕೊಂಡರು.

ಕಿರಾಣಿ ಅಂಗಡಿ, ಹಣ್ಣಿನ ಅಂಗಡಿ, ಬೇಕರಿ, ಸ್ಟೇಶನರಿ, ಹೂವಿನ ಅಂಗಡಿಗಳ ಮೇಲೆ ದಾಳಿ ನಡೆಸಿ ಬಳಕೆ ಮಾಡುತ್ತಿದ್ದ ಏಕಬಳಕೆ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಂಡು ಮುಂದೆ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡದಂತೆ ಜಾಗೃತಿ ಮೂಡಿಸಿದರು.

‘ಸರ್ಕಾರದ ಆದೇಶ ಧಿಕ್ಕರಿಸಿ ಪ್ಲಾಸ್ಟಿಕ್ ಬಳಕೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಪಟ್ಟಣ ಪಂಚಾಯಿತಿ ಯೋಜನಾಧಿಕಾರಿ ಹಂಪಯ್ಯ ಪಾಟೀಲ ಅವರು ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿದರು.

ಯಾವ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎನ್ನುವುದರ ಕುರಿತು ಗೊಂದಲ ನಿವಾರಿಸಬೇಕು ಎಂದು ವ್ಯಾಪಾರಿಗಳು ಒತ್ತಾಯಿಸಿದರು.

ಈ ವೇಳೆ ಪಟ್ಟಣ ಪಂಚಾಯಿತಿ ಸಿಬ್ಬಂದಿ ಸುನೀತಾ, ಚಾಂದ್ ಸಾಬ್, ಸುಧಾಕರ, ಸಾಧು ಸೇರಿದಂತೆ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT