ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಠಾಧೀಶರ ಸಂಘಟನಾ ವೇದಿಕೆ ಉದ್ಘಾಟನೆ 11ರಂದು

Published 8 ಮಾರ್ಚ್ 2024, 16:24 IST
Last Updated 8 ಮಾರ್ಚ್ 2024, 16:24 IST
ಅಕ್ಷರ ಗಾತ್ರ

ರಾಯಚೂರು: ಮಾರ್ಚ್ 11ರಂದು ಕಲಬುರಗಿಯ ವೀರಭದ್ರೇಶ್ವರ ಸಭಾ ಭವನದಲ್ಲಿ ರಾಜ್ಯ ಮಟ್ಟದ ವಿಶ್ವಕರ್ಮ ಮಠಾಧೀಶರ ಹಾಗೂ ಸ್ವಾಮೀಜಿಗಳ ಸಂಘಟನಾ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾ ಸಭಾದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮನೋಹರ ಬಡಿಗೇರ ಹಾಗೂ ವಿಶ್ವಕರ್ಮ ಸಮಾಜದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ರಾಮು ತಿಳಿಸಿದರು.

ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಅವರ ಕಾರ್ಯಗಳಿಂದ ವಿಶ್ವಕರ್ಮ ಸಮಾಜ ಬಲಿಷ್ಠವಾಗಿ ಬೆಳೆಯುತ್ತಿದೆ ಎಂದು ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ಸಮಾಜದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯ, ಶಿಲ್ಪಕಲಾ ಕ್ಷೇತ್ರದ ಅಭಿವೃದ್ಧಿಗೆ ಸಂಘಟನೆ ಬಲಪಡಿಸಲು ಸಮಾಜದ ಮಠಾಧೀಶರು ಹಾಗೂ ಸ್ವಾಮೀಜಿಯವರನ್ನು ಅಣಿಯಾಗಿಸಲು ಸಂಘಟನಾ ವೇದಿಕೆ ಸ್ಥಾಪನೆ ಮಾಡಲಾಗುತ್ತಿದೆ. ರಾಜ್ಯದ ಅನೇಕ ಸಚಿವರು, ಶಾಸಕರು ಹಾಗೂ ಸಮಾಜದ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಮುಖಂಡರಾದ ಎಸ್ ರವೀಂದ್ರಕುಮಾರ, ನರಸಪ್ಪ ಕಂಬಾರ, ಎ.ಈಶ್ವರ ವಿಶ್ವಕರ್ಮ, ವೀರೇಶ ಹಾಗೂ ಅನಂತ ಸೇನಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT