ಭಾನುವಾರ, ಮಾರ್ಚ್ 29, 2020
19 °C

‘ತುರ್ತು ಕೆಲಸದ ಹೊರತು ಮನೆಯಿಂದ ಬರುವಂತಿಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಹತೋಟಿಗೆ ತರುವ ಕಾರಣಕ್ಕಾಗಿ ಜಿಲ್ಲೆಯಿಂದ ಹೊರ ರಾಜ್ಯಕ್ಕೆ ಸಂಪರ್ಕಿಸುವ ಎಲ್ಲ ಅಂತರರಾಜ್ಯ ಸರ್ಕಾರಿ ಬಸ್ ಮತ್ತು ಇತರ ವಾಹನಗಳ ಪ್ರವೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

ಗ್ರಾಮೀಣ ಭಾಗದಿಂದ ಹಾಗೂ ನಗರಗಳಲ್ಲಿ ತುರ್ತು ಕೆಲಸದ ಹೊರತಾಗಿ ಜನರು ಹೊರಬರುವುದನ್ನು ನಿಷೇಧಿಸಲಾಗಿದೆ.  ಕೇವಲ ಅತಿ ಅಗತ್ಯ ದಿನಸಿ ವಸ್ತುಗಳನ್ನು ಮತ್ತು ತುರ್ತು ವೈದ್ಯಕೀಯ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಮಾತ್ರ ನಗರವ್ಯಾಪ್ತಿಯಲ್ಲಿ ಸಂಚರಿಸಲು  ಅನುಮತಿ ಇದೆ. ಇದನ್ನು ಉಲ್ಲಂಘಿಸಿದರೆ ಸಾರ್ವಜನಿಕರು ಕಠಿಣ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)