ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಒಎನ್‌ಒಇ’ ವಿರೋಧಿಸಿ ರಾಷ್ಟ್ರಪತಿಗೆ ಮನವಿ

Published : 26 ಸೆಪ್ಟೆಂಬರ್ 2024, 15:08 IST
Last Updated : 26 ಸೆಪ್ಟೆಂಬರ್ 2024, 15:08 IST
ಫಾಲೋ ಮಾಡಿ
Comments

ರಾಯಚೂರು: ‘ಒಂದು ದೇಶ, ಒಂದು ಚುನಾವಣೆ’(ಒಎನ್‌ಒಇ) ಜಾರಿಗೆ ತರಲು ಮುಂದಾಗಿರುವ ಕೇಂದ್ರ ಸರ್ಕಾರ ತನ್ನ ನಿರ್ಧಾರ ಹಿಂಪಡೆಯಬೇಕು’ ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು ಗುರುವಾರ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

‘ಒಂದು ದೇಶ, ಒಂದು ಚುನಾವಣೆ’ಯ ಪ್ರಸ್ತಾಪವು ಒಕ್ಕೂಟ ವ್ಯವಸ್ಥೆಯ ವಿರುದ್ಧವಾಗಿದೆ. ಪ್ರಜಾಪ್ರಭುತ್ವ  ವಿರೋಧಿಯಾಯೂ ಆಗಿದೆ. ಲೋಕಸಭೆ ಇಲ್ಲವೇ ವಿಧಾನಸಭೆ ಚುನಾವಣೆಯಲ್ಲಿ ಆಡಳಿತ ಪಕ್ಷ ವಿಶ್ವಾಸಮತ ಗಳಿಸುವಲ್ಲಿ ಸೋತರೆ ಎದುರಾಗುವ ಬಿಕ್ಕಟ್ಟಿಗೆ ಹೊಸ ಪ್ರಸ್ತಾಪದಲ್ಲಿ ಪರಿಹಾರವಿಲ್ಲ. ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೋಂದೇ ಯೋಗ್ಯ ಪರಿಹಾರವಾಗಿದೆ. ಇದರ ಬದಲಿಗೆ ಸದನದಲ್ಲಿ ಅಲ್ಪಸಂಖ್ಯಾತರ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ, ಅದು ಪ್ರಜಾಪ್ರಭುತ್ವಕ್ಕೆ ದ್ರೋಹ ಬಗೆದಂತೆ’ ಎಂದು ದೂರಿದರು.

‘ಚುನಾವಣೆ ವ್ಯವಸ್ಥೆ ಬದಲಾಗಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆ ತಿದ್ದುಪಡಿ ಮಾಡಬೇಕು. ಇದು ಗೊತ್ತಿದ್ದರೂ ಕೇಂದ್ರ ಸರ್ಕಾರ ಜನರಲ್ಲಿ ಗೊಂದಲ ಮೂಡಿಸಿ ತಮ್ಮ ಸರ್ಕಾರದ ವೈಫಲ್ಯ ಮರೆಮಾಚಲು ಇಂತಹ ನಿರ್ಧಾರ ಕೈಗೊಳ್ಳುತ್ತಿದೆ’ ಎಂದು ಆರೋಪಿಸಿದರು.

‘ರಾಷ್ಟ್ರಪತಿಯವರು ಇದನ್ನು ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು’ ಎಂದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ರಂಗಪ್ಪ ಹೆಗ್ಡೆ, ಎಂ.ಬಿ. ಮಾರೆಪ್ಪ, ಮಂಜುನಾಥ ಸಿಂಧನೂರು, ಶರಣಪ್ಪ, ಮಲ್ಲೇಶ, ಮಾರೆಪ್ಪ ಟಿ.ಎಸ್., ಬಾಲಪ್ಪ ಮಾಚನೂರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT