ಭಾನುವಾರ, ಆಗಸ್ಟ್ 14, 2022
20 °C
ರಾಯಚೂರಿನಲ್ಲಿ ಅಶುದ್ಧ ನೀರು ಕುಡಿದು ಸಾವು

ರಾಯಚೂರು: ‘ಕುಡಿವ ನೀರು ಕೂಲಂಕಷ ಪರೀಕ್ಷೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಯಚೂರಿನಲ್ಲಿ ಅಶುದ್ಧ ನೀರು ಕುಡಿದು ಆರು ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಆ ನ ಗರದ ಕುಡಿಯುವ ನೀರು ಪೂರೈಕೆ ವ್ಯವಸ್ಥೆಯ ಕೂಲಂಕಷ ಪರೀಕ್ಷೆ ನಡೆಸಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ. 

ಕರ್ನಾಟಕ ಭವನದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ ಗಾರರ ಜತೆ ಶುಕ್ರವಾರ  ಮಾತನಾಡಿ, ಅಶುದ್ಧ ನೀರು ಪೂರೈಕೆಯಾಗುತ್ತಿದೆ ಎಂದು ರಾಯಚೂರು ನಗರದ ನಿವಾಸಿಗಳು ದೂರಿ
ದ್ದಾರೆ. ಈ ಬಗ್ಗೆ ರಾಜ್ಯ ಕುಡಿಯುವ ನೀರು ಹಾಗೂ ಒಳಚರಂಡಿ ಮಂಡಳಿಯ ಮುಖ್ಯ ಎಂಜಿನಿಯರ್‌ ತನಿಖೆ ನಡೆಸುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಹಲವು ಸಭೆಗಳನ್ನು ನಡೆಸಿದ್ದೇನೆ. ಶೀಘ್ರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ’ ಎಂದರು. 

‘ಶುದ್ಧ ನೀರು ಪೂರೈಸಲು ಶುದ್ಧ ನೀರಿನ ಘಟಕ ಸ್ಥಾಪಿಸಲಾಗಿದೆ. ಅದರ ನಿರ್ವಹಣೆಯ ವಿಚಾರದಲ್ಲಿ ಸ್ಥಳೀಯ ಆಡಳಿತಕ್ಕೆ ಹೆಚ್ಚಿನ ಪರಿಣತಿ ಇಲ್ಲ. ಈ ಘಟಕವನ್ನು ಕರ್ನಾಟಕ ಕುಡಿಯುವ ನೀರು ಹಾಗೂ ಒಳಚರಂಡಿ ಮಂಡಳಿಗೆ ಶೀಘ್ರ ಹಸ್ತಾಂತರ ಮಾಡಲಾಗುತ್ತದೆ’ ಎಂದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು