ಈ ರಸ್ತೆಯು ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸಿದೆ. ಆನ್ವರಿ ಗ್ರಾಮದಿಂದ 2 ಕಿ.ಮೀ ದೂರದಲ್ಲಿ ಜೂಗಪ್ಪನ ಹಳ್ಳದ ಸೇತುವೆ ರಸ್ತೆ ಮಧ್ಯೆ ಗುಂಡಿ ಬಿದ್ದಿದೆ. ನಿತ್ಯ ಈ ರಸ್ತೆಯಲ್ಲಿ ನೂರಾರು ವಾಹನಗಳು ಸಾಗುತ್ತವೆ. ಕೆಲವರು ಗುಂಡಿ ತಪ್ಪಿಸಲು ಹೋಗಿ ಬಿದ್ದು ಗಾಯವಾದ ಘಟನೆ ಜರುಗಿವೆ. ಜನರ ಸಮಸ್ಯೆ ಬಗೆಹರಿಸಬೇಕಾದ ಅಧಿಕಾರಿಗಳು ಇತ್ತ ಕಡೆ ಸುಳಿಯುತ್ತಿಲ್ಲ ಎಂದು ಗ್ರಾಮಸ್ಧ ನಾಗರಾಜ ನಾಯಕ ದೂರಿದ್ದಾರೆ.