ಶನಿವಾರ, ಡಿಸೆಂಬರ್ 7, 2019
21 °C
ಕಲ್ಮಠ ಕಾಲೇಜು ಎನ್‌ಸಿಸಿ ಘಟಕ ಉದ್ಘಾಟನೆ

ವಿದ್ಯಾರ್ಥಿಗಳಲ್ಲಿ ಶಿಸ್ತು, ದೇಶಭಕ್ತಿ ಅವಶ್ಯ: ಪಂಡಿತಾರಾಧ್ಯ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾನ್ವಿ: ‘ಕಾಲೇಜು ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಶಿಸ್ತು ಮತ್ತು ಅಧ್ಯಯನದಲ್ಲಿ ಶ್ರದ್ಧೆ ಅವಶ್ಯ’ ಎಂದು ಕಲ್ಮಠದ ವಿರೂಪಾಕ್ಷ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಶ್ರೀಪಂಪಾ ವಿರೂಪಾಕ್ಷೇಶ್ವರ ಕಲ್ಮಠ ಪಿಯು ಕಾಲೇಜಿನಲ್ಲಿ ಮಂಗಳವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ನೂತನ ಎನ್‌ಸಿಸಿ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಎನ್‌ಸಿಸಿ ರಾಷ್ಟ್ರದಲ್ಲಿ ವಿದ್ಯಾರ್ಥಿಗಳ ಶಿಸ್ತುಬದ್ಧ ಸಂಘಟನೆಯಾಗಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆ ಸಮಾಜ ಸೇವಾ ಮನೋಭಾವ ರೂಢಿಸಿಕೊಳ್ಳಬೇಕು. ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಹಾಗೂ ವಿಶ್ವಕರ್ಮ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು.

ಎನ್‌ಸಿಸಿ ಘಟಕದ ಸದಸ್ಯರು, ಸ್ಕೌಟ್ಸ್‌ ಮತ್ತು ಗೈಡ್ಸ್‌ ತಂಡಗಳ ಸದಸ್ಯರಿಂದ ಪಥ ಸಂಚಲನ ನಡೆಸಿದರು
ಪಿಯು ಕಾಲೇಜಿನ ಪ್ರಾಂಶುಪಾಲ ಎಸ್‌.ಎಸ್‌.ಪಾಟೀಲ್, ಆಡಳಿತಾಧಿಕಾರಿ ಸಂಗಯ್ಯ ಸ್ವಾಮಿ, ಕಲ್ಮಠ ಪದವಿ ಕಾಲೇಜು ಪ್ರಾಂಶುಪಾಲ ಕೆ.ವಿ.ರಾಮಕೃಷ್ಣ, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪ್ರಭುಸ್ವಾಮಿ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ ಕಮತರ, ಎನ್‌ಸಿಸಿ ಅಧಿಕಾರಿ ವಿರುಪಣ್ಣ ಪಾಟೀಲ್‌, ಉಪನ್ಯಾಸಕರಾದ ಶಂಕರ್‌ ಹಾಗೂ ಗೌರಿ, ಶಿಕ್ಷಕರಾದ ಪ್ರಭಾವತಿ ಮತ್ತು ಯಲ್ಲಪ್ಪ ನಿಲೋಗಲ್‌ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು