ವೈಕುಂಠ ಏಕಾದಶಿ: ದೇವಸ್ಥಾನಗಳಲ್ಲಿ ಭಕ್ತರ ದಂಡು

7
ವೆಂಕಟೇಶ್ವರ ದೇವರಿಗೆ ಅಲಂಕಾರ, ವಿಶೇಷ ಪೂಜೆ

ವೈಕುಂಠ ಏಕಾದಶಿ: ದೇವಸ್ಥಾನಗಳಲ್ಲಿ ಭಕ್ತರ ದಂಡು

Published:
Updated:
Deccan Herald

ರಾಯಚೂರು: ವೈಕುಂಠ ಏಕಾದಶಿ ನಿಮಿತ್ತ ಮಂಗಳವಾರ ನಗರದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನ ಪಡೆದರು.

ನವೋದಯ ವೆಂಕಟೇಶ್ವರ ದೇವಸ್ಥಾನ, ಆಶಾಪುರ ರಸ್ತೆಯ ರಾಜಮಾತ ದೇವಸ್ಥಾನ, ಉಪ್ಪಾರವಾಡಿ ವೆಂಕಟೇಶ್ವರ ದೇವಸ್ಥಾನ, ಏಗನೂರು ಟೆಂಪಲ್‌ ಹಾಗೂ ವಾಸವಿನಗರ ಬದರಿ ನಾರಾಯಣ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪೂಜೆ ಕೈಗೊಳ್ಳಲಾಯಿತು. ಜೊತೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ವೈಕುಂಠ ಏಕಾದಶಿ ಆಚರಣೆಗಾಗಿ ವೆಂಕಟೇಶ್ವರ ದೇವರಿಗೆ ಅಲಂಕಾರ ಮಾಡಲಾಗಿತ್ತು. ವಿಶೇಷ ಪೂಜಾ ಕೈಂಕರ್ಯಗಳು ಕೈಗೊಂಡು ಭಕ್ತರ ದರ್ಶನಕ್ಕೆ ಅನುಕೂಲ ಮಾಡಲಾಗಿತ್ತು. ಭಕ್ತರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಗಳಿಗೆ ತೆರಳಿ ದರ್ಶನ ಪಡೆದರು.

ವೆಂಕಟೇಶ್ವರ ದೇವರಿಗೆ ವೈಕುಂಠ ಏಕಾದಶಿ ವಿಶೇಷವಾಗಿದ್ದರಿಂದ ವೆಂಕಟೇಶ್ವರ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕಾಗಿ ಬೆಳಿಗ್ಗೆಯಿಂದಲೇ ಭಕ್ತರು ಸಾಲುಗಟ್ಟಿ ನಿಂತು ದರ್ಶನ ತೆಗೆದುಕೊಂಡರು. ಸಂಜೆಯೂ ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ದೇವಸ್ಥಾನಗಳಲ್ಲಿ ಭಕ್ತರಿಗಾಗಿ ಪ್ರಸಾದದ ವ್ಯವಸ್ಥೆಯೂ ಮಾಡಲಾಗಿತ್ತು.

ನವೋದಯ ವೆಂಕಟರಮಣ ದೇವಸ್ಥಾನದಲ್ಲಿ ಅದ್ಧೂರಿಯಾಗಿ ವೈಕುಂಠ ಏಕಾದಶಿ ಆಚರಣೆ ಮಾಡಲಾಯಿತು. ದೇವಸ್ಥಾನವನ್ನು ಹಸಿರು ತೋರಣ ಹಾಗೂ ಹೂವುಗಳಿಂದ ಸಿಂಗರಿಸಲಾಗಿತ್ತು. ತಿರುಮಲ ತಿರುಪತಿಯಲ್ಲಿ ಮಾಡುವಂತೆ ಬಹಳ ಅದ್ಧೂರಿಯಾಗಿ ದೇವರಿಗೆ ಅಲಂಕಾರ ಮಾಡಲಾಗಿತ್ತು. ದೇವರ ದರ್ಶನ ಪಡೆಯುವ ಭಕ್ತರಿಗೆ ಅಗತ್ಯ ವ್ಯವಸ್ಥೆಯನ್ನು ಮಾಡಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಜನರು ಈ ದೇವಸ್ಥಾನಕ್ಕೆ ಭೇಟಿ ನೀಡಿದರು. ಭಕ್ತರಿಗಾಗಿ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !