ಧರ್ಮ ಒಡೆಯುವವರಿಗೆ ತಕ್ಕಪಾಠ: ಯಡಿಯೂರಪ್ಪ

ಬುಧವಾರ, ಏಪ್ರಿಲ್ 24, 2019
31 °C

ಧರ್ಮ ಒಡೆಯುವವರಿಗೆ ತಕ್ಕಪಾಠ: ಯಡಿಯೂರಪ್ಪ

Published:
Updated:

ರಾಯಚೂರು: ‘ಧರ್ಮ ಒಡೆಯುವ ಮೂಲಕ ಯಡಿಯೂರಪ್ಪನನ್ನು ಮುಖ್ಯಮಂತ್ರಿ ಆಗದಂತೆ ಮಾಡಿದವರು ಪಾಠ ಕಲ್ತಿದ್ದಾರೆ. ಈ ಚುನಾವಣೆಯಲ್ಲೂ ಧರ್ಮ ಒಡೆಯುವವರಿಗೆ ವೀರಶೈವ ಲಿಂಗಾಯತರು ತಕ್ಕಪಾಠ ಕಲಿಸಲಿದ್ದಾರೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಜಿಲ್ಲೆಯ ಸಿರವಾರದಲ್ಲಿ ಮಂಗಳವಾರ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವ ಪೂರ್ವ ಸುದ್ದಿಗಾರರೊಂದಿಗೆ ಮಾತನಾಡಿದರು.

ವೀರಶೈವ ಲಿಂಗಾಯತ ವಿಚಾರವಾಗಿ ಸಚಿವ ಎಂ.ಬಿ. ಪಾಟೀಲ ಅವರು ಸೋನಿಯಾಗಾಂಧಿಗೆ ಬರೆದ ಪತ್ರ ಬಹಿರಂಗವಾಗಿದೆ. ಈಗ ಧರ್ಮ ಒಡೆದು ರಾಜಕಾರಣ ಮಾಡಲು ಹೊರಟಿದ್ದಾರೆ. ಸಚಿವ ಡಿ. ಕೆ. ಶಿವಕುಮಾರ ಈಗ ತಪ್ಪಾಗಿದೆ ಎಂದು ಹೇಳುತ್ತಿದ್ದಾರೆ ಎಂದರು.

‘ಮುಖ್ಯಮಂತ್ರಿ ಕುಮಾರಸ್ವಾಮಿ ಕಣ್ಣೀರಿಗೆ ಕವಡೆ ಕಾಸಿನ ಕಿಮ್ಮಿತ್ತಿಲ್ಲ. ಜನರು ಕಟ್ಟಿರುವ ತೆರಿಗೆ ಹಣದಲ್ಲಿ ₹150  ಕೋಟಿ ಚುನಾವಣೆಗೆ ವೆಚ್ಚ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದು, ಸಿಎಂ ಸ್ಥಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಮಂಡ್ಯದಲ್ಲಿ ಷಡ್ಯಂತ್ರ ರೂಪಿಸಿ ಪುತ್ರನನ್ನು ಗೆಲ್ಲಿಸಲು ಹೊರಟಿದ್ದಾರೆ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !