ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಟ್ಟಿ ಪಟ್ಟಣದಲ್ಲಿ ಕುಡಿಯುವ ನೀರಿಗಾಗಿ ಅಲೆದಾಟ

Last Updated 18 ಏಪ್ರಿಲ್ 2020, 19:30 IST
ಅಕ್ಷರ ಗಾತ್ರ

ಹಟ್ಟಿಚಿನ್ನದಗಣಿ: ಪಟ್ಟಣದಲ್ಲಿ ಕುಡಿಯುವ ನೀರಿನ ಸರಬರಾಜು ಸಮರ್ಪಕ ಇಲ್ಲದ ಕಾರಣ ನಿತ್ಯ ಜನರು ಪರದಾಡುತ್ತಿದ್ದಾರೆ.

ವಾರ್ಡ್‌ಗಳಿಗೆ ಕುಡಿಯುವ ನೀರು ಸರಬರಾಜು ಆಗುತ್ತಿಲ್ಲ. ಕ್ಯಾಂಪ್ ಪ್ರದೇಶದ ಪೊಲೀಸ್‌ ಠಾಣೆ ಹತ್ತಿರದ ನಲ್ಲಿ ಎದುರು ಜನರು ಸರದಿ ನಿಲ್ಲುತ್ತಿದ್ದಾರೆ. ಲಾಕ್‌ಡೌನ್ ಇದ್ದರೂ ಜೀವ ಉಳಿಸಿಕೊಳ್ಳಲು ಜನರು ಹೊರಬರುತ್ತಿದ್ದಾರೆ. ನಿತ್ಯ ಅಲೆದಾಡುತ್ತಿರುವುದು ಮಾತ್ರ ನಿಂತಿಲ್ಲ. ನಿತ್ಯ ನೀರಿಗಾಗಿ ಮಕ್ಕಳು, ಯುವಕರು, ಮಹಿಳೆಯರು ಹರಸಾಹಸ ಪಡುತ್ತಿದ್ದಾರೆ. ಆದರೆ ಪರಸ್ಪರ ಅಂತರ ಕಾಪಾಡಬೇಕೆಂದು ಹೇಳುವ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ನೀರಿನ ಸಮಸ್ಯೆ ಪರಿಹಾರ ಮಾಡುವ ಗೋಜಿಗೆ ಹೋಗಿಲ್ಲ.

‘ನೀರಿನ ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಅಹವಾಲು ಸಲ್ಲಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಜನರ ಗೊಳನ್ನು ಕೇಳುವವರೆ ಇಲ್ಲದಂತಾಗಿದೆ’ ಎನ್ನುವುದು ನಿಂಗರಾಜ ಆರೋಪ.

‘ಜನರಿಗೆ ಅಗತ್ಯವಾದ ಬೇಕಾಗಿರುವುದು ಕುಡಿವ ನೀರು. ಸೌಲಭ್ಯ ಒದಗಿಸದೆ ಇದ್ದರೆ ಏನು ಮಾಡುವುದು ಎಂದು ವಾರ್ಡಿನ ಮಹಿಳೆಯರು ಪ್ರಶ್ನಿಸುತ್ತಾರೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೆ ಪ್ರಯೋಜನವಾಗಿಲ್ಲ. ಸಂಬಂಧಪಟ್ಟ ಮೇಲಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು’ ಎನ್ನುವುದು ಜನರ ಒತ್ತಾಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT