ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಎನ್‍ಪಿಎಸ್ ರದ್ದುಪಡಿಸಲು ಒತ್ತಾಯಿಸಿ ಮನವಿ

Published 5 ಜುಲೈ 2023, 7:07 IST
Last Updated 5 ಜುಲೈ 2023, 7:07 IST
ಅಕ್ಷರ ಗಾತ್ರ

ರಾಯಚೂರು: ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ನಿಶ್ಚಿತ ಪಿಂಚಣಿ ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. 

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಸರ್ಕಾರಿ ನೌಕರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ 2022ರ ಜುಲೈ ಯಿಂದ 7ನೇ ವೇತನ ಪರಿಷ್ಕರಣೆ ಜಾರಿಗೊಳಿಸಬೇಕಾಗಿತ್ತು. ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಅನೇಕ ಹೋರಾಟಗಳು ನಡೆದರೂ ಪ್ರಯೋಜನವಾಗಿಲ್ಲ. 7ನೇ ವೇತನ ಆಯೋಗದ ಶಿಫಾರಸುಗಳನ್ನು ಕೂಡಲೇ ಪಡೆದು 1-7-2022ರಿಂದ ಅನ್ವಯವಾಗುವಂತೆ ಶೇ 40ರಷ್ಟು ವೇತನ ಹೆಚ್ಚಳವನ್ನು ಜಾರಿಗೊಳಿಸಬೇಕು. ರಾಜ್ಯದಲ್ಲಿ ಖಾಲಿ ಇರುವ 2.80 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಆಡಳಿತ ಸುಧಾರಣೆ ನೆಪದಲ್ಲಿ ಶಿಫಾರಸು ಮಾಡಲಾಗಿರುವ ಹುದ್ದೆಗಳ ಕಡಿತವನ್ನು ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಕೈಬಿಡಬೇಕು, ಎಲ್ಲ ಇಲಾಖೆಗಳಲ್ಲಿ ನನೆಗುದಿಗೆ ಬಿದ್ದಿರುವ ಸಿ ಮತ್ತು ಆರ್ ಪರಿಷ್ಕರಣೆ, ಜೇಷ್ಠತಾಪಟ್ಟಿ ತಯಾರಿಕೆ ಅಂತಿಮಗೊಳಿಸಿ ಮುಂಬಡ್ತಿ ನೀಡಬೇಕು ಎಂದು ಆಗ್ರಹಿಸಿದರು.

ಹೊರಗುತ್ತಿಗೆ, ಗುತ್ತಿಗೆ, ದಿನಗೂಲಿ ನೌಕರರಿಗೆ, ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರುಗಳಿಗೆ ಸುಪ್ರೀಂಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಎಲ್ಲ ನೇರ ನೇಮಕಾತಿಯಲ್ಲಿ ಅವರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದರು.

ಕೋವಿಡ್ ಸಂದರ್ಭದಲ್ಲಿ ಮುಟ್ಟುಗೋಲು ಹಾಕಿರುವ 18ತಿಂಗಳ ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡಬೇಕು, ಅನುಕಂಪದ ನೇಮಕಾತಿಯಲ್ಲಿ ಇರುವ ನಿರ್ಬಂಧಗಳನ್ನು ಕೈಬಿಡಬೇಕು ಎಂಬುವುದು ಸೇರಿದಂತೆ ಅನೇಕ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ತಾಯಪ್ಪ ಮರ್ಚೆಟ್ಹಾಳ್, ರಾಜ್ಯ ಜಂಟಿ ಕಾರ್ಯದರ್ಶಿ ನಾರಾಯಣ, ಪ್ರಧಾನ ಕಾರ್ಯದರ್ಶಿ ಮೋಹಿನುದ್ದೀನ್, ಪದಾಧಿಕಾರಿಗಳಾದ ವರುಣಕುಮಾರ, ನಾಗೇಶ ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT