ರಾಯಚೂರು: ರಾಯಚೂರಿನಲ್ಲಿಯೇ ಏಮ್ಸ್ ಸ್ಥಾಪಿಸುವಂತೆ ಆಗ್ರಹಿಸಿ ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ ದೆಹಲಿಯಲ್ಲಿ ಪ್ರಧಾನಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಿದೆ.

ನವ ದೆಹಲಿಯ ಜಂತರ್ಮಂತರ್ನಲ್ಲಿ ಧರಣಿ ಸತ್ಯಾಗ್ರಹ ನಡೆಸಲು ಅಲ್ಲಿನ ಪೊಲೀಸರು ಅನುಮತಿ ನೀಡಿಲ್ಲ. ಹೀಗಾಗಿ ಪ್ರಧಾನಮಂತ್ರಿ ಕಚೇರಿಗೆ ತೆರಳಿ ಮನವಿಪತ್ರ ಸಲ್ಲಿಸಲಾಗಿದೆ.

ಎರಡು ವರ್ಷಗಳಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಯುತ್ತಿದೆ. ನಮ್ಮ ಹೋರಾಟದ ಬೇಡಿಕೆಗೆ ಮನ್ನಣೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವೀಯ ಅವರಿಗೆ ಎರಡು ಪತ್ರಗಳನ್ನು ಮತ್ತು ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಒಂದು ಪತ್ರವನ್ನು ನೀಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ.

ದೆಹಲಿಗೆ ತೆರಳಿದ ನಿಯೋಗದಲ್ಲಿ ಸಮಿತಿಯ ಪ್ರಧಾನ ಸಂಚಾಲಕ ಬಸವರಾಜ ಕಳಸ, ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಫೌಂಡೇಶನ್ ಅಧ್ಯಕ್ಷ ವೈಜಿನಾಥ ಬಿರಾದಾರ, ಅಮರೇಗೌಡ ಪಾಟೀಲ, ವಿನಯಕುಮಾರ ಚಿತ್ರಗಾರ, ವಕೀಲ ಬಸವರಾಜ ನಾಡಗೌಡ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.