ಸಿರವಾರ: ಮುಡಾ ಹಗರಣಕ್ಕೆ ಸಂಬಂಧ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡದಂತೆ ಒತ್ತಾಯಿಸಿ ಅಹಿಂದ ಸಂಘಟನೆಯ ಪದಾಧಿಕಾರಿಗಳು ಗ್ರೇಡ್– 2 ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ 40 ವರ್ಷಗಳ ಕಾಲ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಆಡಳಿತ ನಡೆಸಿದ ಸಿದ್ದರಾಮಯ್ಯನವರ ವಿರುದ್ದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಷಡ್ಯಂತ್ರ ರೂಪಿಸಿವೆ. ಮುಡಾ ಹಗರಣ ಕುರಿತಂತೆ ಮುಖ್ಯಮಂತ್ರಿಗಳು ಸದನದಲ್ಲಿ ದಾಖಲೆಗಳೊಂದಿಗೆ ವಿವರಿಸಿದರು. ಕೂಡ ವಿಪಕ್ಷಗಳು ಅವರ ಮೇಲೆ ಸುಳ್ಳು ಆರೋಪಗಳನ್ನು ಸೃಷ್ಟಿಸಿ ಸಿದ್ದರಾಮಯ್ಯ ಅವರನ್ನು ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಭಾಕರ ದೊಡ್ಡಮನೆ, ಬಸವರಾಜ ನವಲಕಲ್ಲು, ಶಾಂತಪ್ಪ ಪೀತಗಲ್, ಶರಣಪ್ಪ, ನಾಗರಾಜ ಬೊಮ್ಮನಾಲ, ಡಿ.ಎಚ್.ಭೀಮಣ್ಣ, ಜೆ.ನಾಗರಾಜ, ಶರೀಫ್, ಸಗರಪ್ಪ, ಶಿವುಕುಮಾರ, ಹುಸೇನಬಾಷ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.