ಬುಧವಾರ, ಆಗಸ್ಟ್ 17, 2022
25 °C

ಜಾರಿ ನಿರ್ದೇಶನಾಲಯ ದುರುಪಯೋಗ ;ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಕೇಂದ್ರದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜಾರಿ ನಿರ್ದೇಶನಾಲಯ ಹಾಗೂ ಇತರೆ ಸರ್ಕಾರದ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಜಿಲ್ಲಾ ಘಟಕದ ಪದಾಧಿಕಾರಿಗಳು  ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸರ್ಕಾರವನ್ನು ವಿರೋಧಿಸುವ ವ್ಯಕ್ತಿಗಳು, ಸಂಸ್ಥೆಗಳ ಹಾಗೂ ಸಂಘಟನೆಗಳ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಇತರೆ ಸರ್ಕಾರಿ ಏಜೆನ್ಸಿಗಳನ್ನು ವ್ಯಾಪಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈಚೆಗೆ ವಿವಿಧ ಭಾಗಗಳಿಂದ ಪಾಪ್ಯೂಲರ್ ಫ್ರಂಟ್ ನಾಯಕರ ನಿವಾಸಗಳು ಹಾಗೂ ಕಚೇರಿಗಳ ಮೇಲೆ ನಡೆಸುತ್ತಿದೆ. ದಾಳಿ ಮತ್ತು ಶೋಧಗಳು ಸ್ವತಂತ್ರವಾಗಿ ಕಾರ್ಯ ಮಾಡುತ್ತಿಲ್ಲ. ಬಿಜೆಪಿ ಇವುಗಳನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ದೂರಿದರು.

ಬಿಜೆಪಿ ಸಿದ್ಧಾಂತದ ವಿರುದ್ಧ ರಾಜಿ ಇಲ್ಲದ ನಿಲುವು ಹೊಂದಿರುವ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ವನ್ನು ಭೇಟೆಯಾಡುತ್ತಿದೆ. ಮುಸ್ಲಿಂ ಹಾಗೂ ತುಳಿತಕ್ಕೆ ಒಳಗಾದ ಸಮುದಾಯದ ಸಬಲೀಕರಣಕ್ಕಾಗಿ ಸಂಘಟನೆ ದುಡಿಯುತ್ತಿದ್ದು, ಸಾರ್ವಜನಿಕರ ದೇಣಿಗೆ ಆಧಾರದ ಮೇಲೆ ಇದ್ದು ಹಣಕಾಸಿನ ವ್ಯವಹಾರಕ್ಕೆ ಸಂಬಂಧ ಸರ್ಕಾರಿ ನಿಯಮ ಪಾಲನೆ ಮಾಡುತ್ತಿದೆ. ಆರ್ ಎಸ್ ಎಸ್ ಹಾಗೂ ಬಿಜೆಪಿ ಹಿತಾಸಕ್ತಿಯ ಪರವಾಗಿ ಕೆಲಸ ಮಾಡುವ ರಾಜಕೀಯ ಗುಂಪುಗಳು, ಎನ್ ಜಿಓ ಗಳನ್ನು ಪ್ರಶ್ನಿಸುವ ಧೈರ್ಯ ಜಾರಿ ನಿರ್ದೇಶನಾಲಯ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಜಾರಿ ನಿರ್ದೇಶನಾಲಯ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳು ಆಡಳಿತಾರೂಢ ಸರ್ಕಾರ, ಆರ್ ಎಸ್ ಎಸ್ ಯಾವುದೇ ಸಂಘಟನೆ ಅಥವಾ ಯಾವುದೇ ವ್ಯಕ್ತಿ ಪರ ಕೆಲಸ ಮಾಡದೇ ಸ್ವತಂತ್ರ, ಸಂವಿಧಾನ ಹಾಗೂ ಕಾನೂನಿನ ನಿಯಮದಡಿ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಮೊಹಮ್ಮದ್ ಇಸ್ಮಾಯಿಲ್, ಕಾರ್ಯದರ್ಶಿ ಅಸೀಮ್ ಸರ್ಕಾಝಿ, ಜಿಲಾನಿ, ಗಫ್ಫರ್, ದಾವೂದ್, ಆಝರ್, ಖದೀರ್, ಜಾವೀದ್ ಮತ್ತಿತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.