ಶನಿವಾರ, ಡಿಸೆಂಬರ್ 7, 2019
22 °C

ಹಾಸ್ಟೆಲ್ ಪ್ರಾರಂಭಿಸುವಂತೆ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ತಾಲ್ಲೂಕಿನ ಯರಗೇರಾದ ಗುಲ್ಬರ್ಗಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗಗಳಲ್ಲಿ ತರಗತಿಗಳು ನಡೆಯುತ್ತಿದ್ದು, ಕೂಡಲೇ ಹಾಸ್ಟೆಲ್ ಗಳನ್ನೂ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಶುಕ್ರವಾರ ಪ್ರತಿಭಟನೆ ಮಾಡಿದರು.

ವಿದ್ಯಾರ್ಥಿಗಳು ತರಗತಿಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗಲು ಸಾರಿಗೆ ವ್ಯವಸ್ಥೆ ಸಮರ್ಪಕವಾಗಿಲ್ಲ. ಇದರಿಂದ ಬಹಳ ತೊಂದರೆ  ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಾದ ಅಂಭಣ್ಣ,ಆನಂದ ಕುಮಾರ, ಕಾರ್ತಿಕ್, ಸಾಬಣ್ಣ, ನಾಗರಾಜ,ಕ್ರಿಷ್ಣ,ಬಸವರಾಜ,ಚಂದ್ರು ಇದ್ದರು.

ಪ್ರತಿಕ್ರಿಯಿಸಿ (+)