ಆಕಾಶವಾಣಿ: ನೇರ ಫೋನ್‌ ಇನ್‌ ಕಾರ್ಯಕ್ರಮ

ಗುರುವಾರ , ಜೂನ್ 20, 2019
26 °C

ಆಕಾಶವಾಣಿ: ನೇರ ಫೋನ್‌ ಇನ್‌ ಕಾರ್ಯಕ್ರಮ

Published:
Updated:

ರಾಯಚೂರು: ಆಕಾಶವಾಣಿ ರಾಯಚೂರು ಕೇಂದ್ರವು ಜೂನ್‌ 10 ರಂದು ಸಂಜೆ 6 ಗಂಟೆ 50 ನಿಮಿಷದಿಂದ 7 ಗಂಟೆ 35 ನಿಮಿಷದವರೆಗೆ ರಾಯಚೂರು ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯಲು ಇರುವ ಅವಕಾಶಗಳು ಮತ್ತು ತೋಟಗಾರಿಕಾ ಇಲಾಖೆಯ ಯೋಜನೆಗಳ ಕುರಿತು ನೇರ ಫೋನ್-ಇನ್ ಕಾರ್ಯಕ್ರಮವನ್ನು ಪ್ರಸಾರ ಮಾಡಲಿದೆ.

ಈ ಕಾರ್ಯಕ್ರಮದಲ್ಲಿ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಮಹಮದ ಅಲಿ ಅವರು ಭಾಗವಹಿಸಿ ರಾಯಚೂರು ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯಲು ಇರುವ ಅವಕಾಶಗಳು ಮತ್ತು ತೋಟಗಾರಿಕಾ ಇಲಾಖೆಯ ಯೋಜನೆಗಳ ಕುರಿತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.

ಕೇಳುಗರು ಹಾಗೂ ರೈತ ಬಾಂಧವರು ಆಕಾಶವಾಣಿ ದೂರವಾಣಿ ಸಂಖ್ಯೆ 223178 ಅಥವಾ 223365 ಇವುಗಳಿಗೆ ಕರೆಮಾಡಿ ರಾಯಚೂರು ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯಲು ಇರುವ ಅವಕಾಶಗಳು ಮತ್ತು ತೋಟಗಾರಿಕಾ ಇಲಾಖೆಯ ಯೋಜನೆಗಳ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ರಾಯಚೂರು ತಾಲ್ಲೂಕಿನ ಹೊರಗಡೆಯಿಂದ ಕರೆಮಾಡುವವರು ಎಸ್.ಟಿ.ಡಿ. ಕೋಡ್ ಸಂಖ್ಯೆ 08532 ಬಳಸಿ ಕರೆ ಮಾಡಬೇಕು ಎಂದು ರಾಯಚೂರು ಆಕಾಶವಾಣಿ ಕೇಂದ್ರದ ಕೃಷಿ ಕಾರ್ಯಕ್ರಮ ನಿರ್ವಾಹಕ ಡಾ.ವ್ಹಿ.ಜಿ.ಬಾವಲತ್ತಿ ಕೋರಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !