ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಳು ಅಕ್ರಮ ಸಾಗಣೆ ಆರೋಪ ಇರುವವರ ಜೊತೆ ಪೊಲೀಸ್ ಇನ್‌ಸ್ಪೆಕ್ಟರ್: ಹರಿದಾಡಿದ ಫೋಟೊ

Published 14 ಮೇ 2024, 15:47 IST
Last Updated 14 ಮೇ 2024, 15:47 IST
ಅಕ್ಷರ ಗಾತ್ರ

ದೇವದುರ್ಗ: ತಾಲ್ಲೂಕಿನ ಬೆಣಕಲ್ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಮರಳು ಅಕ್ರಮ ಸಾಗಣೆ ಆರೋಪ ಇರುವವರ ಜೊತೆ ರಾತ್ರಿ ವೇಳೆ ದೇವದುರ್ಗ ಪೊಲೀಸ್ ಇನ್‌ಸ್ಪೆಕ್ಟರ್ ಅಶೋಕ ಸದಲಗಿ ಅವರು ಕಾಣಿಸಿಕೊಂಡ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಫೋಟೊವನ್ನು ಶಾಸಕಿ ಕರೆಮ್ಮ ಜಿ.ನಾಯಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪೊಲೀಸರ ವಿರುದ್ಧ ಕ್ರಮಕ್ಕೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನೆಟ್ಟಿಗರು ಮರಳು ಅಕ್ರಮವಾಗಿ ಸಾಗಿಸುವವರ ಜೊತೆಗೆ ಪೊಲೀಸರು ಶಾಮೀಲಾಗಿದ್ದಾರೆ. ಆರಕ್ಷಕರು ಅಕ್ರಮ ಚಟುವಟಿಕೆದಾರರ ರಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT