ಪ್ಲಾಸ್ಟಿಕ್ ಆರೋಗ್ಯಕ್ಕೆ ಮಾರಕ: ರಾಘವೇಂದ್ರ ಯಾದವ

7

ಪ್ಲಾಸ್ಟಿಕ್ ಆರೋಗ್ಯಕ್ಕೆ ಮಾರಕ: ರಾಘವೇಂದ್ರ ಯಾದವ

Published:
Updated:

ರಾಯಚೂರು: ಆಧುನಿಕ ಜೀವನದ ಭಾಗವಾಗಿರುವ ಪ್ಲಾಸ್ಟಿಕ್‌ ಬಳಕೆಯು ಜೀವನಕ್ಕೆ ಮಾರಕವಾಗಿದೆ ಎಂದು ವಿಜಯಪುರ ಕೃಷಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ರಾಘವೇಂದ್ರ ಯಾದವ ಹೇಳಿದರು.

ನಗರದ ಶ್ರೀ ವೆಂಕಟೇಶ್ವರ ಪದವಿ ಪೂರ್ವ ಮತ್ತು ಪದವಿ ಮಹಾವಿದ್ಯಾಲದ ಸಭಾಂಗಣದಲ್ಲಿ ಗುರುವಾರ ಯುವ ಬ್ರಿಗೇಡ್‌ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪರಿಸರದಲ್ಲಿ ಎಲ್ಲ ಕಡೆಗಳಲ್ಲೂ ಪ್ಲಾಸ್ಟಿಕ್ ಮಯವಾಗಿದೆ. ಪ್ಲಾಸ್ಟಿಕ್ ಬಳಕೆಯಿಂದ ಮನುಷ್ಯ ಆರೋಗ್ಯದ ಮೇಲೆ ಮಾತ್ರವಲ್ಲದೆ ಪ್ರಾಣಿ, ಪಕ್ಷಿ ಸೇರಿದಂತೆ ಜಲಚರ ಜೀವಿಗಳ ಆರೋಗ್ಯದ ಮೇಲೆ ಪರಿಣಮ ಬಿರಿದೆ. ನಿತ್ಯ ಜೀವನದಲ್ಲಿ ಮನುಷ್ಯ ಅತಿಹೆಚ್ಚು ಬಳಕ್ಕೆ ಮಾಡಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಇದರಿಂದ ಕ್ಯಾನ್ಸರ್ ನಂತಹ ಮಾರಕ ರೋಗಗಳು ಬರುತ್ತಿವೆ ಆದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಮಾಡುವುದಕ್ಕೆ ಮುಂದಾಗಬೇಕು ಎಂದರು.

ಗೋವರ್ಧನ ಮಾತನಾಡಿ, ಗಣೇಶ ಹಬ್ಬ ಆಚರಿಸಲು ಯುವಕರು ದಿನಗಣನೆ ಮಾಡುತ್ತಿದ್ದಾರೆ. ಈ ಹಬ್ಬದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ್ ಮೂರ್ತಿ ಪ್ರತಿಷ್ಠಾನ ಮಾಡುವ ಬದಲು ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠನಾ ಮಾಡಿ

ಪೂಜಿಸಿ ವಿಸರ್ಜನೆ ಮಾಡಬೇಕು. ಈ ಮೂಲಕ ಜಲಚರ ಪ್ರಾಣಿಗಳ ಜೊತೆಗೆ ನೀರು ಸಂರಕ್ಷಣೆ ಮಾಡಿ ಎಂದರು.
ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ರಾಕೇಶ್ ರಾಜಲಬಂಡಿ ಮಾತನಾಡಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !