ರಾಯಚೂರು: ಸಿಂಧನೂರು ತಾಲ್ಲೂಕಿನ ಕಾನಿಹಾಳ ಗ್ರಾಮದ ರಾಜೇಶ್ ನಾಯಕ ಕಳಿಸಿದ್ದ ಮದುವೆ ಆಹ್ವಾನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ಪಂದಿಸಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ರಾಜೇಶ್ ನಾಯಕ ಅವರ ಮದುವೆ ಸವಿತಾ ಅವರೊಂದಿಗೆ ಏ. 13 ರಂದು ನಿಗದಿಯಾಗಿತ್ತು. ಮದುವೆ ಸಂಭ್ರಮಕ್ಕೆ ಪ್ರಧಾನಿ ಮೋದಿಯವರನ್ನೂ ಆಹ್ವಾನಿಸಬೇಕೆಂದು ಬಯಸಿದ ರಾಜೇಶ್, ದೆಹಲಿಯ ಪ್ರಧಾನಿ ಕಚೇರಿಗೆ ಮದುವೆಯ ಆಹ್ವಾನ ಪತ್ರಿಕೆಯನ್ನು ಕಳುಹಿಸಿದ್ದರು. ಈ ಆಹ್ವಾನವನ್ನು ಸ್ವೀಕರಿಸಿದ ಪ್ರಧಾನಿ ಮೋದಿ ಅವರು ಪತ್ರದ ಮೂಲಕ ನವಜೋಡಿಗೆ ಶುಭ ಹಾರೈಸಿದ್ದಾರೆ.

ರಾಜೇಶ್ ನಾಯಕ್ ಅವರಿಗೆ ಪತ್ರ ಬರೆದಿರುವ ಪ್ರಧಾನಿ ಮೋದಿ, ‘ನಿಮ್ಮ ವಿವಾಹ ಮಹೋತ್ಸವಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು. ಜೀವನದ ಈ ಶುಭ ಸಂದರ್ಭಕ್ಕೆ ಕಾಲಿಡುತ್ತಿರುವ ನಿಮಗೆ ಮತ್ತು ಸವಿತಾ ಅವರಿಗೆ ಸುಂದರ ಭವಿಷ್ಯಕ್ಕಾಗಿ ಶುಭಾಶೀರ್ವಾದಗಳು’ ಎಂದು ಹಾರೈಸಿದ್ದಾರೆ.

‘ಪ್ರಧಾನಿ ಮೋದಿಯವರಿಗೆ ಮದುವೆಯ ಆಹ್ವಾನ ಪತ್ರಿಕೆ ಕಳುಹಿಸಿದ್ದೆ. ಅವರ ಕಡೆಯಿಂದ ಕನಿಷ್ಠ ಉತ್ತರವಾದರೂ ಬರಬಹುದೆಂದು ನಿರೀಕ್ಷಿಸಿದ್ದೆ. ಆದರೆ ಹೆಚ್ಚೇನೂ ನಿರೀಕ್ಷೆ ಇರಲಿಲ್ಲ. ಇದೀಗ ಪ್ರಧಾನಿಯವರಿಂದ ಶುಭಾಶಯ ಪತ್ರ ಬಂದಿದೆ. ಇದು ನನಗಷ್ಟೇ ಎಲ್ಲ ನಮ್ಮ ಕುಟುಂಬದವರಿಗೂ ಖುಷಿ ತಂದಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.