ರಾಯಚೂರು: ‘ನ್ಯುಮೋನಿಯಾ ಸೋಂಕಿನಿಂದ ದೇಶದಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಮರಣ ಹೊಂದುವವರ ಪ್ರಮಾಣ ಕಡಿಮೆ ಮಾಡುವುದು ನ್ಯುಮೋನಿಯಾ ಜಾಗೃತಿ ಕಾರ್ಯಕ್ರಮದ ಉದ್ದೇಶ’ ಎಂದು ಜಿಲ್ಲಾಧಿಕಾರಿ ನಿತೀಶ ಕೆ. ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ನ್ಯುಮೋನಿಯಾ ತಡೆಗಟ್ಟುವ ಜಾಗೃತಿ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.

‘ಜ್ವರ, ನೆಗಡಿ, ಕೆಮ್ಮು ಗಂಭೀರ ಲಕ್ಷಣಗಳು ಕಂಡುಬಂದಲ್ಲಿ ಮಕ್ಕಳಿಗೆ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಬಳಿ ಚಿಕಿತ್ಸೆ ಪಡೆಯಬೇಕು’ ಎಂದು ಸಲಹೆ ನೀಡಿದರು.

‘ಚಳಿಗಾಲ ಆರಂಭ ಆಗಿರುವುದರಿಂದ ಐದು ವರ್ಷದೊಳಗಿನ ಮಕ್ಕಳಲ್ಲಿ ನ್ಯುಮೋನಿಯಾ (ಶ್ವಾಸಕೋಶದ ಸೋಂಕು) ಲಕ್ಷಣಗಳಾದ ಜ್ವರ, ನೆಗಡಿ, ಕೆಮ್ಮಿನಂಥ ಗಂಭೀರ ಲಕ್ಷಣಗಳು ಕಂಡುಬಂದರೆ ಮಕ್ಕಳನ್ನು ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ಸೇರಿಸಬೇಕು’ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಶಂಕರ, ಆರ್.ಸಿ.ಎಚ್. ಅಧಿಕಾರಿಗಳಾದ ಡಾ.ನಂದಿತಾ ಎಂ.ಎನ್., ಸಿಂಧನೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ನಾಗರಾಜ ಕಾಟ್ವಾ, ಲಿಂಗಸಗೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ರುದ್ರಗೌಡ ಹಾಗೂ ವೈದ್ಯಾಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.