ಸಿಂಧನೂರು: ತಾಲ್ಲೂಕಿನ ತುರ್ವಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2023ರ ಸೆಪ್ಟೆಂಬರ್ನಲ್ಲಿ ನಡೆದಿದ್ದ ಬಾಲಕಿ ಅಪಹರಣ ಹಾಗೂ ಅತ್ಯಾಚಾರ ಪ್ರಕರಣದ ಅಪರಾಧಿಗೆ ಸಿಂಧನೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೊ ನ್ಯಾಯಾಧೀಶ ಬಿ.ಬಿ.ಜಕಾತಿ ಅವರು 20 ವರ್ಷ ಕಠಿಣ ಶಿಕ್ಷೆ ಹಾಗೂ ₹15 ಸಾವಿರ ದಂಡ ವಿಧಿಸಿ ಬುಧವಾರ ಆದೇಶ ಹೊರಡಿಸಿದ್ದಾರೆ.

ಮಸ್ಕಿ ತಾಲ್ಲೂಕಿನ ಗ್ರಾಮವೊಂದರ ನಿವಾಸಿ ಹನುಮಂತ ಅಮರಪ್ಪ ಪೂಜಾರಿ ಶಿಕ್ಷೆಗೆ ಗುರಿಯಾದ ಅಪರಾಧಿ.

ಬಾಲಕಿ ತಂದೆ ನೀಡಿದ ದೂರಿನ ಮೇರೆಗೆ ಸಬ್ ಇನ್ಸ್ಪೆಕ್ಟರ್ ಎಚ್.ವೀರಾರೆಡ್ಡಿ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ದೋಷರೋಪಣ ಪತ್ರ ಸಲ್ಲಿಸಿದ್ದರು.

ಸಾಕ್ಷಿ ಪುರಾವೆಗಳನ್ನು ಪರಿಶೀಲಿಸಿ ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು ₹15 ಸಾವಿರ ದಂಡ ವಿಧಿಸಲಾಗಿದೆ. ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ಬಾಲಕಿಗೆ ₹7.50 ಲಕ್ಷ ಪರಿಹಾರ ನೀಡಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಂ.ಮಂಜುನಾಥ ಸ್ವಾಮಿ ವಾದ ಮಂಡಿಸಿದ್ದರು.