ಸೋಮವಾರ, ಜನವರಿ 17, 2022
21 °C

‘ಕೊನೆಯ ಪುಟದ ಸಾಲು’ ಕವನ ಸಂಕಲನ ಲೋಕಾರ್ಪಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿಂಧನೂರು: ಸಿಂಧನೂರು ತಾಲ್ಲೂಕಿನ ಎಲೆಕೂಡ್ಲಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಹಾಗೂ ಯುವ ಬರಹಗಾರ ದುರುಗಪ್ಪ ಗುಡದೂರು ಅವರ ‘ಕೊನೆಯ ಪುಟದ ಸಾಲು’ ಚೊಚ್ಚಲ ಕವನ ಸಂಕಲನವನ್ನು ಬೆಂಗಳೂರಿನಲ್ಲಿ ಶುಕ್ರವಾರ ಲೋಕಾರ್ಪಣೆ ಮಾಡಲಾಯಿತು.

ಬೆಂಗಳೂರಿನ ಕನ್ನಡ ಭವನದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಹಾಗೂ ಶಾಲಾ-ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಶಿಕ್ಷಕ ದುರುಗಪ್ಪ ಗುಡದೂರು ಅವರ ‘ಕೊನೆಯ ಪುಟದ ಸಾಲು’ ಕೃತಿಯನ್ನುಸಾಹಿತಿ ಡಾ.ಹಂಪಾ ನಾಗರಾಜಯ್ಯ ಹಾಗೂ ಚಿತ್ರಸಾಹಿತಿ ಜಯಂತ್ ಕಾಯ್ಕಿಣಿ ಲೋಕಾರ್ಪಣೆ ಮಾಡಿದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್.ನಂದೀಶ್ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಕೆ.ಬಿ.ಕಿರಣಸಿಂಗ್ ಮತ್ತಿತರರು ಉಪಸ್ಥಿತರಿದ್ದರು. ಇದೇ ಕಾರ್ಯಕ್ರಮದಲ್ಲಿ ರಾಜ್ಯದ 55 ಯುವ ಬರಹಗಾರರಿಗೆ ಪ್ರಶಸ್ತಿ ವಿತರಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.