ಶುಕ್ರವಾರ, ಆಗಸ್ಟ್ 7, 2020
24 °C

ಲಾಕ್‌ಡೌನ್ ವೇಳೆ ಅನಗತ್ಯ ಸಂಚಾರ: ಬೈಕ್ ಸವಾರರಿಗೆ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ವಾರದ ಲಾಕ್‌ಡೌನ್ ವೇಳೆ ಅನಗತ್ಯವಾಗಿ ಸಂಚರಿಸಿದ ಬೈಕ್ ಸವಾರರಿಂದ ಪೊಲೀಸರು ಒಂದೇ ದಿನದಲ್ಲಿ ಒಟ್ಟು ₹78,700 ದಂಡ ಸಂಗ್ರಹಿಸಿದ್ದಾರೆ.

ಭಾನುವಾರದ ಲಾಕ್ ಡೌನ್ ವೇಳೆ ಅಗತ್ಯ ವಸ್ತುಗಳು, ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಆದರೆ ಜಿಲ್ಲೆಯಲ್ಲಿ ಅನವಶ್ಯಕವಾಗಿ ವಾಹನ ಸವಾರರು ಸಂಚರಿಸಿದ್ದಾರೆ. ಇದರಿಂದ ಪೊಲೀಸರು ಜಿಲ್ಲೆಯಲ್ಲಿ ಒಟ್ಟು 484 ಬೈಕ್ ಸವಾರ ವಿರುದ್ದ ಪ್ರಕರಣ ದಾಖಲಿಸಿ ಬೈಕ್‌ಗಳನ್ನು ವಶ ಪಡಿಸಿಕೊಂಡಿದ್ದಾರೆ. ಅಲ್ಲದೇ ಬೈಕ್ ಸವಾರರಿಂದ ದಂಡ ವಸೂಲಿ ಮಾಡಿದ್ದಾರೆ.

‘ಭಾನುವಾರ ಒಂದು ದಿನ ಲಾಕ್ ಡೌನ್ ಜಾರಿಗೊಳಿಸಿತ್ತು. ಈ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗಿತ್ತು. ಮುಂದಿನ ಭಾನುವಾರವು ಸಹ ಇದೇ ರೀತಿ ಸಂಪೂರ್ಣ ಬಂದ್ ಮಾಡಲಾಗುವುದು. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹರಿಸಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ. ವೇದಮೂರ್ತಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು