ರಾಯಚೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಜ.28 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30ರವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ.

ಲಿಖಿತ ಪರೀಕ್ಷೆಗೆ ಹಾಜಾರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ತಿಳಿಸಿದ್ದಾರೆ.

ಪುರುಷ ಮತ್ತು ಲೈಂಗಿಕ ಅಲ್ಪಸಂಖ್ಯಾತ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸಬೇಕು. ಕಾಲರ್ ರಹಿತ ಶರ್ಟ್ ಧರಿಸುವುದು ಉತ್ತಮ. ಚಿಕ್ಕ ಪಾಕೇಟ್‍ಗಳು ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸತಕ್ಕದ್ದಲ್ಲ, ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್ ಧರಿಸಬಾರದು.

ಪರೀಕ್ಷಾ ಕೇಂದ್ರಗಳಲ್ಲಿ ಶ್ಯೂಗಳನ್ನು ನಿಷೇಧಿಸಲಾಗಿದೆ. ಅಭ್ಯರ್ಗಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆ ಧರಿಸಬೇಕು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು, ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.