ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಪಿ ನೇತೃತ್ವದಲ್ಲಿ ರೈಲ್ವೆ, ಬಸ್‌ನಿಲ್ದಾಣ ಪರಿಶೀಲನೆ

Last Updated 20 ಜನವರಿ 2020, 16:33 IST
ಅಕ್ಷರ ಗಾತ್ರ

ರಾಯಚೂರು: ರಾಜ್ಯದ ಮಂಗಳೂರು ಜಿಲ್ಲೆಯಲ್ಲಿ ಬಾಂಬ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪ್ರಮುಖ ಜನದಟ್ಟನೆಯ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರ ಚಲನವಲನಗಳ ಮೇಲೆ ನಿಗಾವಹಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರ ನೇತೃತ್ವದಲ್ಲಿ ಸೋಮವಾರ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣದಲ್ಲಿ ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯದಳದೊಂದಿಗೆ ಆಗಮಿಸಿ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರಂ ಮತ್ತು ಸುತ್ತಮುತ್ತ ಸ್ಥಳಗಳನ್ನು ಪರಿಶೀಲಿನೆ ನಡೆಸಿದರು.

ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್‌ವೊಂದರಲ್ಲಿ ಬಾಂಬ್ ಪತ್ತೆಯಾದ ಕಾರಣ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬಸ್‌ನಿಲ್ದಾಣ, ರೈಲ್ವೆ ನಿಲ್ದಾಣ, ಆರ್‌ಟಿಪಿಎಸ್, ವೈಟಿಪಿಎಸ್, ಹಟ್ಟಿಚಿನ್ನದ ಗಣಿ ಮತ್ತು ಬಸವಸಾಗರ ಡ್ಯಾಮ್‌ ಬಳಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತದೆ. ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರ ಬ್ಯಾಗ್ ಮತ್ತು ಬಸ್‌ಗಳನ್ನು ಪರಿಶೀಲಿಸಿದರು.

ಸದರ್ ಬಜಾರ್ ಪೊಲೀಸ್ ಠಾಣೆ ಪಿಎಸ್‌ಐ ಉಮೇಶ್ ಕಾಂಬ್ಳೆ ಹಾಗೂ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ತಂಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT