ರಾಜಕೀಯ ವಿದ್ಯಮಾನಗಳಿಂದ ಬೇಸರ: ಪೇಜಾವರ ಶ್ರೀ

ಸೋಮವಾರ, ಮೇ 20, 2019
30 °C

ರಾಜಕೀಯ ವಿದ್ಯಮಾನಗಳಿಂದ ಬೇಸರ: ಪೇಜಾವರ ಶ್ರೀ

Published:
Updated:
Prajavani

ರಾಯಚೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳು ಬೇಸರ ತಂದಿವೆ ಎಂದು ಉಡುಪಿ ಪೇಜಾವರ ಮಠದ ಪೀಠಾಧಿಪತಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.

ಮಧ್ವ ನವಮಿ ನಿಮಿತ್ತ ನಗರದಲ್ಲಿ ಗುರುವಾರ ಆಯೋಜಿಸಿರುವ ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಆಪರೇಷನ್‌ ಕಮಲ ಆಡಿಯೋ ಪ್ರಕರಣದ ಸಮಗ್ರ ತನಿಖೆ ನಡೆಯಬೇಕು. ಸತ್ಯಾಂಶ ಏನೆಂಬುದು ಜನರಿಗೆ ತಿಳಿಯಬೇಕು. ಈ ಬಗ್ಗೆ ಈಗಲೇ ತೀರ್ಮಾನಕ್ಕೆ ಬರಲಾಗುವುದಿಲ್ಲ. ರಾಜಕೀಯ ಪಕ್ಷಗಳು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ. ರೆಸಾರ್ಟ್‌ಗಳಿಗೆ ಶಾಸಕರನ್ನು ಕರೆದೊಯ್ಯುವುದು, ಆಡಿಯೋ ರೆಕಾರ್ಡಿಂಗ್‌ನಂತಹ ವಿಚಾರಗಳಿಗೆ ರಾಜಕೀಯ ನಾಯಕರು ಹೆಚ್ಚು ಗಮನ ಹಾಕಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದರು.

ರಾಜ್ಯದಲ್ಲಿ ಬರಗಾಲವಿದೆ. ಈ ಬಗ್ಗೆ ಸರ್ಕಾರವು ಗಮನ ಹರಿಸಿ ಜನರ ಸಮಸ್ಯೆಗಳನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !