ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹52 ಕೋಟಿ ವೆಚ್ಚದಲ್ಲಿ ಕಾಲುವೆ ಆಧುನೀಕರಣ: ಬಸನಗೌಡ ತುರ್ವಿಹಾಳ

ಮಸ್ಕಿ ಜಲಾಶಯಕ್ಕೆ ಶಾಸಕ ಬಸನಗೌಡ ತುರ್ವಿಹಾಳರಿಂದ ಬಾಗಿನ ಅರ್ಪಣೆ
Last Updated 7 ಆಗಸ್ಟ್ 2021, 11:20 IST
ಅಕ್ಷರ ಗಾತ್ರ

ಮಸ್ಕಿ: ‘ತಾಲ್ಲೂಕಿನ ರೈತರ ಜೀವನಾಡಿಯಾಗಿರುವ ಮಸ್ಕಿ ಜಲಾಶಯ ವ್ಯಾಪ್ತಿಯ ಎಡ ಹಾಗೂ ಬಲದಂಡೆ ಕಾಲುವೆ ಸೇರಿದಂತೆ ಎಲ್ಲ ವಿತರಣಾ ಕಾಲುವೆಗಳನ್ನು ₹ 52 ಕೋಟಿ ವೆಚ್ಚದಲ್ಲಿ ಆಧುನೀಕರಣಗೊಳಿಸಲಾಗುತ್ತಿದೆ’ ಎಂದು ಶಾಸಕ ಆರ್. ಬಸನಗೌಡ ತುರ್ವಿಹಾಳ ತಿಳಿಸಿದರು‌.

ತಾಲ್ಲೂಕಿನ ಮಸ್ಕಿ ಜಲಾಶಯಕ್ಕೆ ಶನಿವಾರ ಬಾಗಿನ ಅರ್ಪಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಶೀಘ್ರ ಟೆಂಡರ್ ಪ್ರಕ್ರಿಯೆ‌ ಪೂರ್ಣಗೊಂಡು, ಕಾಮಗಾರಿ ಅರಂಭವಾಗಲಿದೆ ಎಂದರು.

ಮಸ್ಕಿ ಜಲಾಶಯ ಭರ್ತಿಯಾಗಿದೆ. ಈ ಭಾಗದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು ಕೊಡುವ ಸಂಬಂಧ ಆ. 10 ರಂದು ಸಲಹಾ ಸಮಿತಿ ಸಭೆ ಕರೆಯಲಾಗಿದೆ. ಅಂದು ನೀರು ಬಿಡುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೋವಿಡ್ ಮೂರನೇ ಅಲೆ ತಡೆಗೆ ಸಾರ್ವಜನಿಕರು ಸರ್ಕಾರದೊಂದಿಗೆ ಕೈಜೋಡಿಸಬೇಕು. ಕೋವಿಡ್ ಮೊದಲ ಹಾಗೂ ಎರಡನೇ ಅಲೆ ಸಾಕಷ್ಟು ನಷ್ಟ ಉಂಟುಮಾಡಿದೆ. ಜನರ ಬದುಕು ಕಷ್ಟಕರವಾಗಿದೆ. ಎಲ್ಲರೂ ಮಾರ್ಗಸೂಚಿ ಪಾಲಿಸುವ ಕೆಲಸ ಮಾಡಬೇಕು ಎಂದರು.

ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರು, ಮುಖಂಡ ಶ್ರೀಶೈಲಪ್ಪ ಬ್ಯಾಳಿ, ಸಿದ್ದಣ್ಣ ಹೂವಿನಭಾವಿ, ಎಚ್.ಬಿ.ಮುರಾರಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಣ್ಣ ನಾಯಕ, ಮಲ್ಲಯ್ಯ ಬಳ್ಳಾ, ಹನುಮಂತಪ್ಪ ವೆಂಕಟಾಪೂರ, ಮೈಬುಸಾಬ ಮುದ್ದಾಪೂರ, ಆದನಗೌಡ ದಳಪತಿ, ಮಲ್ಲನಗೌಡ ಗುಂಡಾ, ಸಿದ್ದನಗೌಡ ಮಾಟೂರ ಹಾಗೂ ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದಾವುದ್ ಸಾಬ ಇದ್ದರು.

ಪೈಪ್‌ಲೈನ್‌ ಕಾಮಗಾರಿಗೆ ಚಾಲನೆ

ಮಸ್ಕಿ: ತಾಲ್ಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯ ₹99 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಶುದ್ಧ ಕುಡಿಯುವ ನೀರಿನ ಪೈಪ್‌ಲೈನ್‌ ಕಾಮಗಾರಿಗೆ ಶಾಸಕ ಆರ್. ಬಸನಗೌಡ ತುರ್ವಿಹಾಳ ಶನಿವಾರ ಚಾಲನೆ ನೀಡಿದರು.

₹28 ಕೋಟಿ ವೆಚ್ಚದಲ್ಲಿ 40 ಕ್ಕೂ ಹೆಚ್ಚು ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಮಸ್ಥರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಭೂಮಿ ಪೂಜೆ : ₹1 ಕೋಟಿ ವೆಚ್ಚದಲ್ಲಿ ತಾಲ್ಲೂಕಿನ ಮುದಬಾಳ ಕ್ರಾಸ್‌ನಿಂದ ಮಾರಲದಿನ್ನಿಗೆ ಸಂಪರ್ಕ ಕಲ್ಪಿಸುವ ರಸ್ತೆ, ₹85 ಲಕ್ಷ ವೆಚ್ಚದಲ್ಲಿ ಜಕ್ಕೇರಮಡಗದಿಂದ ಮಟ್ಟೂರು ತಾಂಡಾಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ₹1 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ವ್ಯಾಸನಂದಿಹಾಳ–ವಾಲ್ಮೀಕಿ ನಗರ ರಸ್ತೆಯ ಡಾಂಬರೀಕರಣ ಕಾಮಗಾರಿಗೆ ಶಾಸಕ ಆರ್. ಬಸನಗೌಡ ತುರ್ವಿಹಾಳ ಭೂಮಿ ಪೂಜೆ ನೆರವೇರಿಸಿದರು.

ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರ, ಮುಖಂಡ ಸಿದ್ದಣ್ಣ ಹೂವಿನಭಾವಿ, ಶ್ರೀಶೈಲಪ್ಪ ಬ್ಯಾಳಿ, ಎಚ್. ಬಿ. ಮುರಾರಿ ಆದನಗೌಡ ದಳಪತಿ, ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್ ತ್ರಿವೇಣಿ, ಗುತ್ತಿಗೆದಾರರು ಹಾಗೂ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT