ಸಿಂಧನೂರು: ‘ಜನರ ಬೇಡಿಕೆಯಂತೆ ಪೋತ್ನಾಳ ಹೆಚ್ಚುವರಿ ರೈಲು ನಿಲ್ದಾಣ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಕಾಮಗಾರಿಯನ್ನು ಗುಣಮಟ್ಟದಿಂದ ಕಾಲಮಿತಿಯೊಳಗೆ ಮುಗಿಸಬೇಕು’ ಎಂದು ಸಚಿವ ಎನ್.ಎಸ್.ಬೋಸರಾಜು ರೈಲ್ವೆ ಇಲಾಖೆಯ ಇಇ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಂಧನೂರಿನಿಂದ ರಾಯಚೂರು ವರೆಗಿನ ರೈಲು ಮಾರ್ಗದ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು.

ಸಿಂಧನೂರಿನಿಂದ ರಾಯಚೂರಿನವರೆಗೆ ರೈಲು ಸಂಪರ್ಕವಾಗುವುದರಿಂದ ವ್ಯವಹಾರ ವಹಿವಾಟು ಹೆಚ್ಚಾಗಲಿದೆ. ಇದರಿಂದ ಹೆಚ್ಚುವರಿ ಉದ್ಯೋಗ ಅವಕಾಶಗಳು ಸಿಗಲಿದೆ. ರೈಲ್ವೆ ಇಲಾಖೆಯ ಬೇಡಿಕೆಯಂತೆ ಹೊಸೂರು ಹಾಗೂ ಮಂದಾಪುರ ಸೇರಿ 35 ಎಕರೆ ಭೂಸ್ವಾದೀನ ಪ್ರಕ್ರಿಯೆ ಈಗಾಗಲೇ ನಡೆದಿದ್ದು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಭೂಸ್ವಾಧೀನ ಅಧಿಕಾರಿಗಳಿಗೆ ಎನ್.ಎಸ್.ಬೋಸರಾಜ ಅವರು ಸೂಚನೆ ನೀಡಿದರು.

ಯಾವುದೇ ರೀತಿಯ ತಾಂತ್ರಿಕ ತೊಂದರೆ ಆದಗಂತೆ ಕಾಮಗಾರಿ ನಿರ್ವಹಿಸಬೇಕು ಎಂದು ಸೌತ್ ವೆಸ್ಟರ್ನ್ ರೈಲ್ವೆಯ ಇಇ ಉಮಾ ಮಹೇಶ ಅವರಿಗೆ ತಿಳಿಸಿದರು.

ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಹಾಗಾಗಿ ಎಲ್ಲಾ ಅಧಿಕಾರಿಗಳು ಮುಂಜಾಗ್ರತೆಯೊಂದಿಗೆ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಸಂಸದ ಜಿ.ಕುಮಾರ ನಾಯಕ, ಮಾನ್ವಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ಕಪೂರ್ಸಾಬ್, ಅಮರೇಗೌಡ ಹಂಚಿನಾಳ್, ರೈಲ್ವೆ ಇಲಾಖೆ ತಾಂತ್ರಿಕ ವಿಭಾಗದ ಸಿಬ್ಬಂದಿ, ಭೂಸ್ವಾದಿನ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.