ಮಂಗಳವಾರ, ಜನವರಿ 21, 2020
27 °C

8 ರಂದು ಪ್ರತಿಭಾ ಪುರಸ್ಕಾರ; ಸಾಧಕರಿಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲಾ ಛಲವಾದಿ ನೌಕರರ ಕ್ಷೇಮಾಭಿವೃದ್ಧಿ ವೇದಿಕೆಯಿಂದ ಡಿಸೆಂಬರ್ 8 ರಂದು ಭಾನುವಾರ ಬೆಳಿಗ್ಗೆ 10:30ಕ್ಕೆ ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಛಲವಾದಿ ಸಮಾಜದ ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಛಲವಾದಿ ನೌಕರರ ಕ್ಷೇಮಾಭಿವೃದ್ಧಿ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ವಸಂತ ಎಂ. ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಸಾನಿಧ್ಯ ವಹಿಸುವರು. ಬಳ್ಳಾರಿ ವಲಯ ಐಜಿಪಿ ಡಾ.ಎಂ ನಂಜುಂಡಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಜನಪ್ರತಿನಿಧಿಗಳು ಆಗಮಿಸುವರು ಎಂದು ತಿಳಿಸಿದರು.

ನರಸಿಂಹಲು, ಬಿ ರಾಘವೇಂದ್ರ, ರವಿ, ನಂದೀಶ, ಹನುಮಂತ ನಂದಿನಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪ್ರತಿಕ್ರಿಯಿಸಿ (+)