ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜನರ ಸಮಸ್ಯೆ ಪರಿಹಾರಕ್ಕೆ ಆದ್ಯತೆ’

Last Updated 27 ಮೇ 2022, 12:16 IST
ಅಕ್ಷರ ಗಾತ್ರ

ಕವಿತಾಳ: ‘ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಒಂದೇ ವೇದಿಕೆಯಲ್ಲಿ ಲಭ್ಯವಿದ್ದು ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳಬಹುದು’ ಎಂದು ತಹಶೀಲ್ದಾರ್‌ ಕವಿತಾ. ಆರ್ ಹೇಳಿದರು.

ಮಸ್ಕಿ ತಾಲ್ಲೂಕಿನ ಸುಂಕನೂರು ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಸಾರ್ವಜನಿಕರು ತಾಲ್ಲೂಕು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಮೀನಿನ ಖಾತೆ ಪೋಡಿ, ಪಹಣಿ ತಿದ್ದುಪಡಿ, ವಿವಿಧ ಮಾಸಾಶನಗಳ ಮಂಜೂರಾತಿ, ಆಧಾರ್ ಕಾರ್ಡ್‌ ತಿದ್ದುಪಡಿ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗುವುದು’ ಎಂದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಮಾತನಾಡಿ, ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಾಯಿಸಿದ ಬಿಪಿಎಲ್ ಕಾರ್ಡ್‌ ಹೊಂದಿದ ಫಲಾನುಭವಿಗಳಿಗೆ ಉಚಿತ ಚಿಕಿತ್ಸೆಗೆ ಅವಕಾಶಗಳಿದ್ದು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು’ ಎಂದರು.

ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪವನ್‍ ಕುಮಾರ, ಸಿಡಿಪಿಒ ಮುದುಕಪ್ಪ ಹರವಿ, ಡಾ.ಪಿಬಿ.ಸಿಂಗ್. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸುಧೀರ್ ಬಾಬು ಮತ್ತಿತರರು ಇದ್ದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಕಂದಾಯ, ಕೃಷಿ, ತೋಟಗಾರಿಕೆ ಮತ್ತು ಅರಣ್ಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸರ್ಕಾರದ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT