ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರು ಪೂರೈಕೆಗೆ ಆದ್ಯತೆ: ರಾಜಾವೆಂಕಟಪ್ಪ ನಾಯಕ

Last Updated 27 ಜುಲೈ 2021, 13:51 IST
ಅಕ್ಷರ ಗಾತ್ರ

ಸಿರವಾರ: ‘ಗ್ರಾಮದ ಪ್ರತಿ ಮನೆಯ ಬಾಗಿಲಿಗೆ ಕುಡಿಯುವ ನೀರು ಸರಬರಾಜು ಆಗಲಿದ್ದು, ನೀರನ್ನು ವ್ಯರ್ಥ ಮಾಡದೇ ಮಿತವಾಗಿ ಬಳಸಿರಿ' ಎಂದು ಶಾಸಕ ರಾಜಾವೆಂಕಟಪ್ಪ ನಾಯಕ ಹೇಳಿದರು.

ತಾಲ್ಲೂಕಿನ ಹರವಿ ಗ್ರಾಮದಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸುವ 'ಜಲಜೀವನ್ ಮಿಷನ್' ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, 2021-21 ನೇ ಸಾಲಿನ ₹ 2 ಕೋಟಿ ಅನುದಾನದಲ್ಲಿ ಜಲಜೀವನ ಮಿಷನ್ ಕಾಮಗಾರಿಗೆ ಪೂಜೆ ನೆರವೇರಿಸಲಾಗಿದೆ ಎಂದರು.

ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡ ಗ್ರಾಮಸ್ಥರಿಗೆ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಕೊಡಬೇಕು ಎಂದು ಅಧಿಕಾರಿ ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಹನುಮಂತ, ಉಪಾಧ್ಯಕ್ಷೆ ಶಿವಮ್ಮ, ಸದಸ್ಯರಾದ ಶಶಿಧರ ಗೌಡ, ಯಲಪ್ಪ ನಾಯಕ, ಪೋಮಣ್ಣ, ಬಸಪ್ಪ ನಾಯಕ, ನಾಗರಾಜ ಹಡಪದ, ಭೀಮಣ್ಣ, ಅಂಬಣ್ಣ ನಾಯಕ, ದಂಡಪ್ಪ, ಜೆಡಿಎಸ್ ರಾಜ್ಯ ಯುವ ಘಟಕದ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ಶರಣಬಸವಗೌಡ, ಶಂಕರಗೌಡ ವಕೀಲ, ಬಸನಗೌಡ ದಳಪತಿ, ಗೋಪಾಲ ನಾಯಕ ಹರವಿ, ನಾಗಬೂಸಪ್ಪ ಸಾಹುಕಾರ, ಚನ್ನಪ್ಪಗೌಡ ಪೋಲಿಸ್ ಪಾಟೀಲ, ಬಸವರಾಜ ಕಾರಮಂಚಿ, ಬಸಪ್ಪಗೌಡ, ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT