ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ಪ್ರಮುಖ ತರಕಾರಿ ಬೆಲೆ ಸ್ಥಿರ

Published 18 ಫೆಬ್ರುವರಿ 2024, 4:42 IST
Last Updated 18 ಫೆಬ್ರುವರಿ 2024, 4:42 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರು ಖಾಲಿ ಇದೆ. ಕುಡಿಯುವ ನೀರಿಗಾಗಿ ಬ್ಯಾರೇಜ್‌ಗಳಲ್ಲಿ ಸಂಗ್ರಹಿಸಿ ಇಡಲಾಗಿದೆ. ಅಂತರ್ಜಲ ಮಟ್ಟವೂ ಕಡಿಮೆಯಾಗುತ್ತಿರುವ ಕಾರಣ ಬೋರ್‌ವೆಲ್‌ಗಳಲ್ಲೂ ನೀರು ಕಡಿಮೆಯಾಗಿದೆ. ಬಿಸಿಲಿನ ಕಾರಣ ಕಡಿಮೆ ಪ್ರಮಾಣದಲ್ಲಿ ತರಕಾರಿ ಬೆಳೆಯಲಾಗಿದೆ.

ನೆರೆಯ ಆಂಧ್ರಪ್ರದೇಶ, ತೆಲಂಗಾಣದ ಜಿಲ್ಲೆಗಳಿಂದ ಹಿರೇಕಾಯಿ, ಗಜ್ಜರಿ, ಅವರೆಕಾಯಿ, ಸೋರೆಕಾಯಿ, ಸೌತೆಕಾಯಿ, ಎಲೆಕೋಸು, ಹೂಕೋಸು ಹಾಗೂ ಸೊ‍ಪ್ಪು , ಮಹಾರಾಷ್ಟ್ರದಿಂದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಆವಕವಾಗಿದೆ. ಬೆಳಗಾವಿ ಜಿಲ್ಲೆಯಿಂದ ಹಸಿ ಮೆಣಸಿನಕಾಯಿ, ಕೊತಂಬರಿ, ಮೆಂತೆ ಸೊಪ್ಪು, ಈರುಳ್ಳಿ ಸೊಪ್ಪು ತರಕಾರಿ ಸಗಟು ಮಾರುಕಟ್ಟೆಗೆ ಬಂದಿದೆ.

ಗ್ರಾಹಕರು ಬೆಳಗಿನ ವೇಳೆಯಲ್ಲೇ ಮಾರುಕಟ್ಟೆ ಪ್ರದೇಶಕ್ಕೆ ಹೋಗಿ ತರಕಾರಿ ಸೊಪ್ಪು ಖರೀದಿಸಿ ರೆಫ್ರಿಜಿರೇಟರ್‌ಗಳಲ್ಲಿ ಇಡುತ್ತಿದ್ದಾರೆ. ಬಹುಬೇಗ ಬಾಡದ ತರಕಾರಿಗಳನ್ನೇ ಹೆಚ್ಚಾಗಿ ಖರೀದಿಸುತ್ತಿದ್ದಾರೆ. ರಣ ಬಿಸಿಲು ಇದ್ದರೂ ಬಹುತೇಕ ತರಕಾರಿ ಬೆಲೆ ಸ್ಥಿರವಾಗಿದೆ.

‘ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಬೆಳ್ಳುಳ್ಳಿ ಹೊರತು ಪಡಿಸಿ ಬಹುತೇಕ ತರಕಾರಿಗಳ ಬೆಲೆ ಸ್ಥಿರವಾಗಿದೆ. ಬಿಸಿಲು ಹೆಚ್ಚಿದಂತೆ ತರಕಾರಿ ಬೆಲೆಯೂ ಹೆಚ್ಚಾಗುವ ಸಾಧ್ಯತೆ ಇದೆ ’ ಎಂದು ತರಕಾರಿ ವ್ಯಾಪಾರಿ ಕೆ.ಶಶಿಕುಮಾರ ಹೇಳುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT