ಫಸಲ್ ಬಿಮಾ ಯೋಜನೆ: ಮಾಹಿತಿ ಕಾರ್ಯಾಗಾರ

ಹಾಲಾಪುರ (ಕವಿತಾಳ): ‘ಮುಂಗಾರು ಹಂಗಾಮಿನಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಅರ್ಹ ರೈತರು ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಸಹಾಯಕ ಕೃಷಿ ಅಧಿಕಾರಿ ಸದ್ದಾಂ ಹುಸೇನ್ ಹೇಳಿದರು.
ಮಸ್ಕಿ ತಾಲ್ಲೂಕಿನ ಹಾಲಾಪುರದ ರೈತ ಸಂಪರ್ಕ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರೈತರಿಗೆ ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಯೂರಿಯಾ ಗೊಬ್ಬರದ ಅತಿಯಾದ ಬಳಕೆಯಿಂದ ಮಣ್ಣಿನಲ್ಲಿನ ಸೂಕ್ಷ್ಮಾಣು ಜೀವಿಗಳ ಪ್ರಮಾಣ ಹಾಗೂ ಭೂಮಿಯ ಫಲವತ್ತತೆ ಕಡಿಮೆಯಾಗುತ್ತದೆ. ದೀರ್ಘ ಕಾಲದಲ್ಲಿ ಭೂಮಿ ಬರಡಾಗುತ್ತದೆ. ಹೀಗಾಗಿ ಬೇವು ಲೇಪಿತ ಯೂರಿಯಾ ಬಳಕೆಯನ್ನು ಕಡಿಮೆ ಪ್ರಮಾಣದಲ್ಲಿ ಮಾಡುವ ಮೂಲಕ ಭೂಮಿಯನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
‘ಫಸಲ್ ಬಿಮಾ ಯೋಜನೆಯಡಿ ಬೇರೆ ಬೇರೆ ಬೆಳೆಗಳಿಗೆ ಪ್ರತ್ಯೇಕ ಅರ್ಜಿ ಸಲ್ಲಿಸಬೇಕು. ರೈತರು ಸ್ವಯಂ ಆಗಿ ಬೆಳೆ ಸಮೀಕ್ಷೆ ಮಾಹಿತಿ ಸಲ್ಲಿಸಬೇಕು’ ಎಂದರು.
ವೆಂಕೋಬ ನಾಯಕ, ದೇವಣ್ಣ, ಮುದುಕಣ್ಣ, ಮಲ್ಲಯ್ಯ ಗೋರ್ಕಲ್, ಹನುಮಂತ ನಾಯಕ, ಭೀಮಣ್ಣ ಮಿಲ್ಟ್ರಿ, ಅಮರಯ್ಯಸ್ವಾಮಿ ಮತ್ತು ರಾಮಪ್ಪ ಫರಂಗಿ ಮತ್ತಿತರರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.