ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸ್ವಚ್ಛ ಭಾರತ ಪರಿಕಲ್ಪನೆ ಅನುಷ್ಠಾನಕ್ಕೆ ಆದ್ಯತೆ’

Last Updated 27 ಸೆಪ್ಟೆಂಬರ್ 2021, 2:33 IST
ಅಕ್ಷರ ಗಾತ್ರ

ಮಸ್ಕಿ: ಸ್ವಚ್ಛ ಭಾರತದ ಕನಸು ಕಂಡಿದ್ದ ಮಹಾತ್ಮಗಾಂಧಿ ಅವರ ಕನಸು ನನಸು ಮಾಡುವಲ್ಲಿ ಪಟ್ಟಣದ ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಶ್ರಮಿಸುತ್ತಿದೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.

ಪಟ್ಟಣದ ಗಾಂಧಿ ನಗರದ ಡಾ. ಆಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಭಾನುವಾರ ಅಭಿನಂದನ ಶಿಕ್ಷಣ ಸಂಸ್ಥೆಯ ‘ಸಂಡೆ ಫಾರ್ ಸೋಶಿಯಲ್ ವರ್ಕ್ ‘ ಅಭಿಯಾನದ ಲೋಗೋ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಪ್ರತಿ ಭಾನುವಾರ ಯುವಕರ ತಂಡದೊಂದಿಗೆ ಪಟ್ಟಣ ಹಾಗೂ ಗ್ರಾಮದ ಸ್ವಚ್ಛತೆಗೆ ಸಂಸ್ಥೆ ಮುಂದಾಗುವ ಮೂಲಕ ಎಲ್ಲರ ಗಮನ ಸೆಳೆದಿದೆ. ಸಾರ್ವಜನಿಕರು ಈ ಸಂಸ್ಥೆಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ನಾಯಕ ನಟ ರೂರಲ್ ಅಂಜನ್, ಎಂ. ಅಮರೇಶ, ಡಾ.ಮಲ್ಲಿಕಾರ್ಜುನ ಇತ್ಲಿ, ಬಸವಲಿಂಗಯ್ಯ ಲಿಂಗಶೆಟ್ಟಿ, ಲಕ್ಷ್ಮಿನಾರಾಯಣ ಶೆಟ್ಟಿ, ಜಿ. ವೆಂಕಟೇಶ ನಾಯಕ, ನಾಗರಾಜ ಯಂಬಲದ, ಮೌನೇಶ ಮುರಾರಿ, ಜಿಲಾನಿ ಖಾಜಿ, ಪ್ರಮೀಳಾ ದಾಸರ, ಅಭಿನಂದನ್ ಸಂಸ್ಥೆಯ ಗೌರವಾಧ್ಯಕ್ಷ ಶಿವಪ್ರಸಾದ ಕ್ಯಾತನಟ್ಟಿ, ಸಂಸ್ಥಾಪಕ ರಾಮಣ್ಣ ಹಂಪರಗುಂದಿ, ಆಶಾ ಕ್ಯಾತನಟ್ಟಿ, ಶೃತಿ ಹಂಪರಗುಂದಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT