ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಕಂಪೆನಿಗಳಿಂದ ವಂಚನೆ: ಪ್ರವೀಣ್‌ರೆಡ್ಡಿ ಗುಂಜಹಳ್ಳಿ

ಸಿಐಟಿಯುನಿಂದ ರ‍್ಯಾಲಿ, ಬಹಿರಂಗ ಸಭೆ
Last Updated 1 ಮೇ 2019, 14:17 IST
ಅಕ್ಷರ ಗಾತ್ರ

ರಾಯಚೂರು: ಖಾಸಗಿ ಕಂಪನಿ ಮಾಲಿಕರು, ಗುತ್ತಿಗೆ ಕಾರ್ಮಿಕರನ್ನು ಶೋಷಣೆ ಮಾಡುತ್ತಿದ್ದಾರೆ ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪ್ರವೀಣ್‌ರೆಡ್ಡಿ ಗುಂಜಹಳ್ಳಿ ಹೇಳಿದರು.

ವಿಶ್ವಕಾರ್ಮಿಕರ ದಿನಾಚರಣೆ ನಿಮಿತ್ತ ಸಿಐಟಿಯುನಿಂದ ಬುಧವಾರ ಏರ್ಪಡಿಸಿದ್ದ ರ‍್ಯಾಲಿ ಮತ್ತು ಬಹಿರಂಗ ಸಭೆಯಲ್ಲಿ ಮಾತನಾಡಿದರು.

ಕಡಿಮೆ ವೇತನ ನೀಡುವುದರ ಜೊತೆಗೆ ಕಾರ್ಮಿಕರಿಗೆ ಯಾವುದೇ ಸೌಲಭ್ಯಗಳನ್ನು ನೀಡದೇ ವಂಚಿಸಲಾಗುತ್ತಿದೆ. ಸರ್ಕಾರದ ಯಾವುದೇ ಕಾರ್ಮಿಕ ಕಾನೂನುಗಳನ್ನು ಪಾಲಿಸದೇ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸುವುದರ ಮೂಲಕ ಬೆದರಿಕೆ ನೀಡುತ್ತಿದ್ದಾರೆ ಎಂದರು.

ಕಾರ್ಮಿಕರ ಹಕ್ಕುಗಳ ಮೇಲೆ ದೊಡ್ಡ ರೀತಿಯ ಗದಾಪ್ರಹಾರ ನಡೆಯುತ್ತಿದೆ. ಸರ್ಕಾರದ ಕಾರ್ಮಿಕ ಅಧಿಕಾರಿಗಳು ಮಧ್ಯಪ್ರವೇಶಿಸಿ ಕಾರ್ಮಿಕರ ಹಕ್ಕುಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ನಿಯಂತ್ರಿಸಬೇಕು. ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದರು.

ಸಿಐಟಿಯು ಧ್ವಜಾರೋಹಣವನ್ನು ಜಿಲ್ಲಾಧ್ಯಕ್ಷೆ ಎಚ್.ಪದ್ಮಾ ನೆರವೇರಿಸಿದರು.

ಅಧ್ಯಕ್ಷತೆ ವಹಿಸಿದ್ದ ವಿಮಾ ನೌಕರರ ಸಂಘದ ವಿಭಾಗೀಯ ಅಧ್ಯಕ್ಷ ಎಂ. ಶರಣಗೌಡ ಮಾತನಾಡಿ, ಕಾರ್ಮಿಕರು ತಮ್ಮ ಹಕ್ಕು ಮತ್ತು ಸೌಲಭ್ಯಗಳನ್ನು ಪಡೆಯುವ ನಿಟ್ಟಿನಲ್ಲಿ ಸಂಘಟಿತರಾಗಿ ಸರ್ಕಾರ ಮತ್ತು ಖಾಸಗಿ ಕಂಪನಿಗಳ ದೌರ್ಜನ್ಯವನ್ನು ಎದುರಿಸಲು ಮುಂದಾಗಬೇಕು ಎಂದರು.

ಮುಖ್ಯ ಅತಿಥಿ ವಿಮಾ ನೌಕರರ ಸಂಘದ ವಿಭಾಗೀಯ ಕಾರ್ಯದರ್ಶಿ ಎಂ. ರವಿ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ್, ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷ ಸುಲೋಚನ ಮಾತನಾಡಿದರು.

ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ಡಿ.ಎಸ್. ಶರಣಬಸವ ಮಾತನಾಡಿದರು.

ಮಹಾದೇವ ಜಂಬಲದಿನ್ನಿ, ವರಲಕ್ಷ್ಮೀ, ಗುರುರಾಜ ದೇಸಾಯಿ, ಚನ್ನಾರೆಡ್ಡಿ, ಮಲ್ಲಿಕಾರ್ಜುನ, ನಾಗಮ್ಮ, ಕಲ್ಯಾಣಮ್ಮ, ಚನ್ನಬಸವ ಸ್ವಾಮಿ, ಶ್ರೀನಿವಾಸ, ಈರಣ್ಣ ಸ್ವಾಮಿ, ಪಾಲ್ ಪ್ರಸಾದ್, ಮಲ್ಲೇಶ್ ಗಧಾರ್, ಶರಣಪ್ಪ, ಭಾಸ್ಕರ್, ಮಲ್ಲಿಕಾರ್ಜುನ, ಶಕುಂತಲ, ವೆಂಕಟಲಕ್ಷ್ಮೀ ಗುರುನಾಥ, ರಂಗನಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT