ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶೇಷ ಪ್ಯಾಕೇಜ್‌ ಘೋಷಿಸಿ

ಖಾಸಗಿ ಕಾಲೇಜುಗಳ ಆಡಳಿ ಮಂಡಳಿಗಳ ಒಕ್ಕೂಟದಿಂದ ಪ್ರತಿಭಟನೆ
Last Updated 14 ಸೆಪ್ಟೆಂಬರ್ 2020, 11:09 IST
ಅಕ್ಷರ ಗಾತ್ರ

ಮಾನ್ವಿ: ಅನುದಾನರಹಿತ ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರಿಗೆ ಆರ್ಥಿಕ ನೆರವು ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕಗಳ ಈಡೇರಿಕೆಗೆ ಒತ್ತಾಯಿಸಿ ತಾಲ್ಲೂಕು ಅನುದಾನರಹಿತ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಹಾಗೂ ಖಾಸಗಿ ಕಾಲೇಜುಗಳ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಿದರು.

ಲಾಕ್‌ಡೌನ್‌ ಕಾರಣದಿಂದ ವೇತನ ಇಲ್ಲದೆ ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಮಾಸಿಕ ₹5 ಸಾವಿರ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಬೇಕು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಅನುದಾನ ನೀಡಬೇಕು. ರಾಯಚೂರು ವಿಶ್ವವಿದ್ಯಾಲಯ ಪ್ರಾರಂಭಕ್ಕೆ ಹೆಚ್ಚಿನ ಅನುದಾನ ನೀಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಸಂಬಂಧಪಟ್ಟ ಕಾಲೇಜುಗಳ ಮುಖಾಂತರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮಾನ್ವಿ ತಾಲ್ಲೂಕಿನ ಗ್ರಾಮೀಣ ಭಾಗಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಸೌಕರ್ಯ ಕಲ್ಪಿಸಬೇಕು. ಕಲ್ಯಾಣ ಕರ್ನಾಟಕ ಭಾಗದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ನೀಡಬೇಕು. ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯುವಂತೆ ಒತ್ತಾಯಿಸಲಾಯಿತು. ನಂತರ ತಹಶೀಲ್ದಾರ್ ಅಮರೇಶ ಬಿರಾದಾರ ಅವರಿಗೂ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಪ್ರತ್ಯೇಕವಾಗಿ ಸಲ್ಲಿಸಲಾಯಿತು.

ಅನುದಾನರಹಿತ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಪಿ.ತಿಪ್ಪಣ್ಣ ಬಾಗಲವಾಡ, ಖಾಸಗಿ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಬಸವರಾಜ ಭೋಗಾವತಿ, ಇತರ ಪದಾಧಿಕಾರಿಗಳಾದ ಈರಣ್ಣ ಮರ್ಲಟ್ಟಿ, ಮನೋಜ ಮಿಶ್ರಾ, ತಿಪ್ಪಣ್ಣ ಎಂ.ಹೊಸಮನಿ, ಎಚ್.ಮೌನೇಶ, ಡಾ.ಎಚ್.ರಾಜಶೇಖರ, ಮಹಾಂತೇಶ ಓಲೇಕಾರ, ಆಂಜನೇಯ ನಸಲಾಪುರ, ರವಿಶರ್ಮಾ, ಮಹೇಶಕುಮಾರ, ಬಸನಗೌಡ, ಮಹಾಂತಗೌಡ, ಹನುಮಂತ ಹರವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT