ಮಂಗಳವಾರ, ಆಗಸ್ಟ್ 20, 2019
21 °C

ಪ್ರಿಯಂಕಾ ಗಾಂಧಿ ಬಂಧನ ವಿರೋಧಿಸಿ ರಾಯಚೂರು ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Published:
Updated:

ರಾಯಚೂರು: ಉತ್ತರ ಪ್ರದೇಶದಲ್ಲಿ ಪ್ರಿಯಂಕಾ ಗಾಂಧಿ ಅವರನ್ನು ಬಂಧನ ಮಾಡಿರುವುದನ್ನು ವಿರೋಧಿಸಿ ನಗರದ ಡಾ.ಬಿ.ಆರ್‌. ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್‌ನಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.

ಗುಂಡಿನ ದಾಳಿಗೆ ಒಳಗಾಗಿ ಪ್ರಾಣ ತೆತ್ತಿರುವ ಹತ್ತು ಮಂದಿಯ ಕುಟುಂಬದವರನ್ನು ಭೇಟಿಮಾಡಲು ಸೋನ್‌ಭದ್ರಕ್ಕೆ ಹೊರಟಿದ್ದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಶುಕ್ರವಾರ ಪೊಲೀಸರು ತಡೆದು ನಿಲ್ಲಿಸಿದ್ದರು.

ಸರ್ಕಾರದ ಕ್ರಮವನ್ನು ಖಂಡಿಸಿ ಪ್ರಿಯಾಂಕಾ ಹಾಗೂ ಅವರ ಬೆಂಬಲಿಗರು ರಸ್ತೆಯಲ್ಲೇ ಪ್ರತಿಭಟನೆಗಿಳಿದಿದ್ದರು. ಆ ಸಂದರ್ಭದಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದು ಸರ್ಕಾರಿ ಅತಿಥಿಗೃಹಕ್ಕೆ ಕರೆದೊಯ್ದಿದ್ದರು.

* ಇದನ್ನೂ ಓದಿ: ಉತ್ತರ ಪ್ರದೇಶ: ಗೊಂಡರ ಭೇಟಿಗೆ ಹೊರಟ ಪ್ರಿಯಾಂಕಾಗೆ ತಡೆ

 

Post Comments (+)