ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶೇಷ ಲಸಿಕಾ ಅಭಿಯಾನಕ್ಕೆ ಚಾಲನೆ

Last Updated 11 ಡಿಸೆಂಬರ್ 2019, 16:30 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯನ್ನು ಗಂಟಲುಮಾರಿ ಹಾಗೂ ಧನುರ್ವಾಯು ರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ ಎಚ್ ಹೇಳಿದರು.

ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ಎಲ್.ಬಿ.ಎಸ್ ನಗರ ವ್ಯಾಪ್ತಿಯ ಪೊಲೀಸ್ ಕಾಲೋನಿಯ ಸರ್ಕಾರಿ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ವಿಶೇಷ ಲಸಿಕಾ ಆಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಾದ್ಯಂತ ಡಿಸೆಂಬರ್ 11 ರಿಂದ 31ರ ವರೆಗೆ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದು, ಈ ಅಭಿಯಾನದಲ್ಲಿ 5 ರಿಂದ 16 ವರ್ಷದೊಳಗಿನ ₹4ಲಕ್ಷ 32ಸಾವಿರ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಎಲ್ಲ ಖಾಸಗಿ, ಅನುದಾನಿತ, ಸರ್ಕಾರಿ ಶಾಲಾ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವುದರ ಮೂಲಕ ಜಿಲ್ಲೆಯನ್ನು ಗಂಟಲುಮಾರಿ, ಧನುರ್ವಾಯು, ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾರ್ವಜನಿಕರ ಸಹಕರಿಸಬೇಕು ಎಂದರು.

ಗಂಟಲುಮಾರಿ, ನಾಯಿ ಕೆಮ್ಮು ಮತ್ತು ಧನುರ್ವಾಯ ರೋಗ ತಡೆಯಲು ಮಕ್ಕಳಿಗೆ ಲಸಿಕೆ ಹಾಕಿಸಬೇಕು. ಎಲ್ಲ ಮಕ್ಕಳಿಗೆ ತಮ್ಮ ತಮ್ಮ ಶಾಲೆಗಳಲ್ಲಿ ಉಚಿತವಾಗಿ ಲಸಿಕೆ ಹಾಕಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಆರೋಗ್ಯ ಕೇಂದ್ರದ ಹತ್ತಿರ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುತ್ತದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ವಿಜಯಾ.ಕೆ ಮಾತನಾಡಿ, ಶಾಲಾ ಮಕ್ಕಳಿಗೆ ಈ ಅಭಿಯಾನದಲ್ಲಿ ನೀಡುವ ಲಸಿಕೆ ಉಚಿತ ಹಾಗೂ ಸುರಕ್ಷಿತವಾಗಿದ್ದು, ಪ್ರತಿ ಲಸಿಕಾ ಕೇಂದ್ರದಲ್ಲಿ ವೈದ್ಯರೊಬ್ಬರನ್ನು ನಿಯೋಜಿಸಿ ಲಸಿಕೆ ನೀಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಡಾ.ನಾಗರಾಜ, ಡಾ.ಅಶ್ವಿನಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಹಮ್ಮದ ಶಾಕೀರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಾಮಸ್ವಾಮಿ, ಲಕ್ಷ್ಮೀ ಮುಂಡಾಸ, ತಾಲೂಕು ಮೇಲ್ವಿಚಾರಕ ರಂಗರಾವ ಕುಲಕರ್ಣಿ, ಮಲೇರಿಯಾ ತಾಂತ್ರಿಕ ಮೇಲ್ವಿಚಾರಕಿ ಸಂಧ್ಯಾ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ವಸಂತಕುಮಾರಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸರೋಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT