ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಹಕ್ಕು ಉಲ್ಲಂಘನೆಯಾಗದಂತೆ ಎಚ್ಚರ ವಹಿಸಿ: ವೆಂಕಟೇಶ ಸೂಚನೆ

Published 21 ಅಕ್ಟೋಬರ್ 2023, 14:03 IST
Last Updated 21 ಅಕ್ಟೋಬರ್ 2023, 14:03 IST
ಅಕ್ಷರ ಗಾತ್ರ

ರಾಯಚೂರು: ‘ಮಕ್ಕಳ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಅನಿಷ್ಠ ಪದ್ಧತಿಗೆ ಸಿಲುಕಿದ ಮಕ್ಕಳ ರಕ್ಷಣೆ ಮಾಡಬೇಕು. ಯಾವುದೇ ಕಾರಣಕ್ಕೂ ಮಕ್ಕಳ ಹಕ್ಕು ಉಲ್ಲಂಘನೆಯಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಸಭಾಂಗಣದಲ್ಲಿ ಶನಿವಾರ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

‘ಶಾಲೆಗಳಲ್ಲಿ ಮೂಲಸೌಕರ್ಯ, ಕಟ್ಟಡ, ಶೌಚಾಲಯ ಹಾಗೂ ನೀರಿನ ವ್ಯವಸ್ಥೆ ಮಾಡಬೇಕು. ಮಕ್ಕಳ ಹಾಜರಾತಿ ಕಡಿಮೆಯಾಗದಂತೆ ಆಗಾಗ ಮೇಲ್ವಿಚಾರಣೆ ನಡೆಸಬೇಕು. ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಮೇಲೆ ದೌರ್ಜನ್ಯಗಳು ಕಂಡು ಬಂದಾಗ ಇತರ ಇಲಾಖೆಗಳ ಸಹಕಾರ ಪಡೆದು ಮಕ್ಕಳಿಗೆ ರಕ್ಷಣೆ ಒದಗಿಸಬೇಕು’ ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿಗಳಿಂದ ಪೋಕ್ಸೊ ಪ್ರಕರಣ, ಬಾಲ್ಯ ವಿವಾಹ ಪ್ರಕರಣ ಹಾಗೂ ಮಕ್ಕಳ ಮೇಲಾಗುವ ದೌರ್ಜನ್ಯಗಳ ಕುರಿತು ಮಾಹಿತಿ ಪಡೆದರು.

‘ಮಕ್ಕಳ ಸಮಸ್ಯೆಗಳ ಬಗ್ಗೆ ಮಕ್ಕಳ ಹಕ್ಕು ರಕ್ಷಣಾ ಘಟಕದ ಪದಾಧಿಕಾರಿಗಳು ಮುಕ್ತವಾಗಿ ಮಾಹಿತಿ ಹಂಚಿಕೊಳ್ಳಬೇಕು. ಎಲ್ಲ ಇಲಾಖೆಗಳ ಸಹಕಾರ ಅಗತ್ಯವಾಗಿದ್ದು, ಎಲ್ಲರೂ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು’ ಎಂದು ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನಕುಮಾರ ಎಂ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಮಂಗಳಾ ಹೆಗಡೆ, ಆರ್‌ಟಿಒ ವಿನಯಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪಿ.ಒ ಶರಣಮ್ಮ, ಮಾನ್ವಿ ತಹಶೀಲ್ದಾರ್ ಅಬ್ದುಲ್ ವಾಹಿದ್, ಲಿಂಗಸುಗೂರು ತಹಶೀಲ್ದಾರ್ ಶಂಶಾಲಂ, ಮಸ್ಕಿ ತಹಶೀಲ್ದಾರ್ ಸುಧಾ ಅರಮನೆ, ರೈಲ್ವೆ ಇಲಾಖೆಯ ಇನ್‌ಸ್ಪೆಕ್ಟರ್ ಅಭಿಷೇಕಕುಮಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಕಾರ್ಮಿಕ ಇಲಾಖೆ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT