ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು | ಗುರಿ ಸಾಧಿಸದಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ

Published 28 ಫೆಬ್ರುವರಿ 2024, 14:42 IST
Last Updated 28 ಫೆಬ್ರುವರಿ 2024, 14:42 IST
ಅಕ್ಷರ ಗಾತ್ರ

ರಾಯಚೂರು: ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯ ಅನುದಾನ ಸಮರ್ಪಕವಾಗಿ ಬಳಸಿಕೊಂಡು ಪ್ರಗತಿ ಸಾಧಿಸುವುದು ಆಯಾ ಇಲಾಖೆ ಅಧಿಕಾರಿಗಳ ಜವಾಬ್ದಾರಿ. ಗುರಿ ಸಾಧಿಸಲು ವಿಫಲರಾದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ತುಕಾರಾಮ ಪಾಂಡ್ವೆ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ಒದಗಿಸಲು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಯೋಜನೆಗಳಿಗೆ ಬಿಡುಗಡೆಯಾದ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಖರ್ಚು ಮಾಡಬೇಕು ಎಂದು ತಿಳಿಸಿದರು.

ಎಸ್‌ಸಿಎಸ್‌ಪಿ ಮತ್ತು ಟಿಎಸ್‍ಪಿ ಯೋಜನೆಗಳನ್ನು ಹಾಗೂ ಇಲಾಖೆಗೆ ಬರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಈ ಯೋಜನೆಗಳಡಿ ಕೈಗೊಂಡ ಕಾಮಗಾರಿಗಳು ಪೂರ್ಣಗೊಂಡ ನಂತರ ಸಂಬಂಧಪಟ್ಟ ಇಲಾಖೆಯಿಂದ ಪ್ರಮಾಣ ಪತ್ರ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಗದೀಶ ಗಂಗಣ್ಣನವರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಆರ್.ದೇವಿಕಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರಾಜೇಂದ್ರ ಜಲ್ದಾರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನಕುಮಾರ, ಪಶು ಸಂಗೋಪನಾ ಇಲಾಖೆಯ ಅಧಿಕಾರಿ ಅಶೋಕ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಬಸನಗೌಡ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಮಹ್ಮದ್ ಅಲಿ, ಜೆಸ್ಕಾಂ ಅಧಿಕಾರಿ ಚಂದ್ರಶೇಖರ ದೇಸಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT