ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ರಕ್ಷಣೆ ಆದ್ಯ ಕರ್ತವ್ಯ: ಜಯಶ್ರೀ

ಪೊಕ್ಸೊ ಕಾಯ್ದೆ, ಆರ್‌ಟಿಇ ಕುರಿತು ಮಕ್ಕಳ ಅಹವಾಲು ವಿಚರಣಾ ಕಾರ್ಯಕ್ರಮ
Last Updated 21 ಜನವರಿ 2022, 15:08 IST
ಅಕ್ಷರ ಗಾತ್ರ

ರಾಯಚೂರು: ಮಕ್ಕಳ ರಕ್ಷಣೆ ಮತ್ತು ಪೋಷಣೆ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ಆದ್ದರಿಂದ ಅಧಿಕಾರಿಗಳು ಮಕ್ಕಳ ಹಕ್ಕುಗಳ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಜಯಶ್ರೀ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳಿಗಾಗಿ ಕೋವಿಡ್ ಸಂದರ್ಭದಲ್ಲಿ ಮಕ್ಕಳು ಎದ್ದರಿಸುತ್ತಿರುವ ಸಮಸ್ಯೆಗಳ ಕುರಿತು ಮಕ್ಕಳೊಂದಿಗೆ ಸಂವಾದ ಹಾಗೂ ಪೊಕ್ಸೊ ಕಾಯ್ದೆ, ಆರ್.ಟಿ.ಇ ಕುರಿತು ಮಕ್ಕಳ ಅಹವಾಲು ವಿಚಾರಣಾ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ಮಕ್ಕಳು ದೇಶಕ್ಕೆ ಬೆನ್ನೆಲುಬು ಇದ್ದಂತೆ. ಅವರ ಬಗ್ಗೆ ಅಧಿಕಾರಿಗಳು ಕಾಳಜಿ ವಹಿಸಿ, ಜ್ಞಾನ ಸಂಪಾದಿಸುವ ಉಡುಗೊರೆಗಳನ್ನು ಕೊಡಿಸಬೇಕು. ಎಳೆ ವಯಸ್ಸಿನಲ್ಲೇ ಮಕ್ಕಳಿಗೆ ಉನ್ನತ ಹುದ್ದೆಗೆ ಏರುವಂತಹ ಕನಸುಗಳನ್ನು ರೂಪಿಸಬೇಕು. ಮಹನೀಯರ ವಿಚಾರಧಾರೆಗಳನ್ನು ತಿಳಿಸಿಕೊಡಬೇಕು. ಉತ್ತಮ ಸಮಾಜ ಕಟ್ಟುವ ನಿಟ್ಟಿನಲ್ಲಿ ಮಕ್ಕಳನ್ನು ಉತ್ತಮ ರೀತಿಯಲ್ಲಿ ಮೌಲ್ಯಯುತ ಶಿಕ್ಷಣ ನೀಡಿ ಬೆಳೆಸಬೇಕಿದೆ ಎಂದು ತಿಳಿಸಿದರು.

ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಭಿಕ್ಷಾಟನೆ, ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ (1098) ಕಾರ್ಯಕ್ಕೆ ಕೈಜೋಡಿಸಬೇಕು. ಮಕ್ಕಳು ದೌರ್ಜನ್ಯಕ್ಕೊಳಗಾದಾಗ ತಕ್ಷಣ ಸಹಾಯವಾಣಿಗೆ ಕರೆ ಮಾಡಿ, ನಿಮಗೆ ಆಗುತ್ತಿರುವ ತೋದರೆಗಳ ಬಗ್ಗೆ ಮುಕ್ತವಾಗಿ ಹಂಚಿಕೊಂಡು ಪರಿಹಾರ ಕಂಡುಕೊಳ್ಳಬೇಕು’ ಎಂದು ಹೇಳಿದರು.

ಮಕ್ಕಳ ಮೇಲಿನ ದೌರ್ಜನ್ಯ, ಅವರಿಗೆ ಸಿಗಬೇಕಾದ ಕಾನೂನಿನ ಸಲಹೆಗಳು, ಅವರಿಗೆ ನೀಡಬೇಕಾದ ಧೈರ್ಯ ಗಳು, ಪ್ರೋತ್ಸಾಹಗಳು ವಿವರಗಳನ್ನು ಆಕರ್ಷಕ ಶೈಲಿಯಲ್ಲಿ ವಿವರಿಸಿದರು.

ಜಿಲ್ಲೆಯ ವಿವಿಧ ತಾಲ್ಲೂಕಿನ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಶಾಲೆಯ ಶಿಕ್ಷಕರ ಕೊರತೆ, ಶೌಚಾಲಯ, ನೀರು ಹಾಗೂ ಮೂಲಸೌಕರ್ಯದ ಸಮಸ್ಯೆ ಕುರಿತು ಗಮನ ಸೆಳೆದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅದ್ಯಕ್ಷೆ ಜಯಶ್ರೀ ಅವರು ವಿದ್ಯಾರ್ಥಿಗಳ ಪ್ರಶ್ನೆಗೆ ಸ್ಪಂದಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೌಲಭ್ಯ ಕಲ್ಪಿಸುವಂತೆ ಸೂಚನೆ ನೀಡಿದರು. ಅಲ್ಲದೇ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಆಗಮಿಸಿ ಬಾಲ ಕಾರ್ಮಿಕ, ಬಾಲ್ಯ ವಿವಾಹ ಹಾಗೂ ಶೈಕ್ಷಣಿಕ ಸಮಸ್ಯೆಯ ಕುರಿತು ದೂರು ನೀಡಿದರು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವೀರನಗೌಡ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT