ರಾಯಚೂರು: ‘ಕಾರ್ಮಿಕರ ಆರೋಗ್ಯ ರಕ್ಷಣೆ ಮುಖ್ಯ ಗುರಿಯಾಗಿಟ್ಟುಕೊಂಡು ಅವರಿಗೆ ಆರೋಗ್ಯ ಸೇವೆ ಒದಗಿಸಲು ವಾಹನವನ್ನು ಲೋಕಾರ್ಪಣೆಗೊಳಿಸಲಾಗಿದೆ’ ಎಂದು ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹೇಳಿದರು.

ನಗರದ ಶಾಸಕರ ಕಚೇರಿ ಆವರಣದಲ್ಲಿ ಶನಿವಾರ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆಯೋಜಿಸಿದ್ದ ಸಂಚಾರ ಆರೋಗ್ಯ ಘಟಕದ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಆರತಿ ಮಾತನಾಡಿ, ‘ಜಿಲ್ಲೆಯ ಕಟ್ಟಡ ನಿರ್ಮಾಣ ಕಾರ್ಮಿಕರನ್ನು ಅವರಿರುವ ಸ್ಥಳಕ್ಕೆ ತೆರಳಿ ಉಚಿತವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸುವುದು, ಚಿಕಿತ್ಸೆ ಹಾಗೂ ಸಲಹೆ ನೀಡಲು ಮೊದಲಾದ ಸೇವೆ ಒದಗಿಸಲು ಜಿಲ್ಲೆಯಲ್ಲಿ ಮೂರು ಸಂಚಾರಿ ಆರೋಗ್ಯ ಘಟಕಗಳನ್ನು ಸಜ್ಜುಗೊಳಿಸಲಾಗಿದೆ’ ಎಂದು ಹೇಳಿದರು.

‘ಕಾರ್ಮಿಕ ಇಲಾಖೆ ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ ರೂಪುಗೊಂಡಿರುವ ಈ ಘಟಕಗಳಲ್ಲಿ ವಿವಿಧ ತಪಾಸಣೆಗಳು, ಹೈಟೆಕ್ ಆರೋಗ್ಯ ಸೌಲಭ್ಯ ವ್ಯವಸ್ಥೆಯಿದ್ದು, ಒಂದು ಕ್ಲಿನಿಕ್ನಲ್ಲಿ ಹೊರರೋಗಿಗಳಿಗೆ ದೊರೆಯುವ ಎಲ್ಲ ಸೌಲಭ್ಯಗಳೂ ಇದರಲ್ಲಿ ಸಿಗಲಿವೆ’ ಎಂದರು.

‘ಕಾರ್ಮಿಕ ಕಾರ್ಡ್ ಹೊಂದಿರುವ ಜಿಲ್ಲೆಯ 1,13,283 ಕಾರ್ಮಿಕರು ಹಾಗೂ ಅವರ ಕುಟುಂಬದವರಿಗೂ ಆರೋಗ್ಯ ಸೇವೆ ದೊರೆಯಲಿದೆ’ ಎಂದು ಹೇಳಿದರು.

ಘಟಕದಲ್ಲಿ 13 ಉಪಕರಣಗಳು: ವೈದ್ಯಕೀಯ ಉಪಕರಣಗಳು, ಪ್ರಯೋಗಾಲಯದ ಉಪಕರಣಗಳು ಹಾಗೂ ವಿವಿಧ ವೈದ್ಯಕೀಯ ಬಳಕೆ ವಸ್ತುಗಳು ಸೇರಿದಂತೆ ಒಟ್ಟು 13 ರೀತಿಯ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ. ಸಿಬ್ಬಂದಿಗೆ ಬಯೊಮೆಟ್ರಿಕ್ ಹಾಜರಾತಿ ವ್ಯವಸ್ಥೆಯೂ ಇದೆ. ಜಿಪಿಎಸ್ ವ್ಯವಸ್ಥೆಯೂ ಲಭ್ಯವಿದ್ದು, ತೆರಳುವ ಸ್ಥಳ, ಕಾರ್ಯಾಚರಣೆ ಸಮಯ, ಎಲ್ಲಿ ತಂಗುತ್ತದೆ ಎಂಬ ಎಲ್ಲ ಮಾಹಿತಿಯೂ ಕಚೇರಿಗೆ ತಲುಪಲಿದೆ. ಒಪ್ಪಂದ ಮಾಡಿಕೊಂಡಿರುವ ಖಾಸಗಿ ಆಸ್ಪತ್ರೆಯು ಕಾರ್ಯಾಚರಣೆಯನ್ನು ನಿರ್ವಹಿಸುತ್ತದೆ ಎಂದು ಮಾಹಿತಿ ನೀಡಿದರು.

ಪ್ರತಿ ಸಂಚಾರಿ ಆರೋಗ್ಯ ಘಟಕದಲ್ಲಿ ಒಬ್ಬರು ಎಂಬಿಬಿಎಸ್ ವೈದ್ಯಕೀಯ ಅಧಿಕಾರಿ, ಇಬ್ಬರು ಶುಶ್ರೂಷಕರು, ಒಬ್ಬರು ಫಾರ್ಮಸಿಸ್ಟ್ ಅಥವಾ ಆಡಳಿತ ಸಹಾಯಕರು, ತಲಾ ಒಬ್ಬ ಪ್ರಯೋಗಾಲಯ ತಜ್ಞರು ಚಾಲಕ ಅಥವಾ ಸಹಾಯಕ ಸೇರಿದಂತೆ 6 ಮಂದಿ ಕಾರ್ಯನಿರ್ವಹಿಸುವರು. ಜಿಲ್ಲೆಯಲ್ಲಿನ ವಾರ್ಡ್ ಹೋಬಳಿ ಗ್ರಾಮ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಮಟ್ಟದಲ್ಲಿ ನೋಂದಾಯಿಸಿದ ಕಾರ್ಮಿಕರ ಪಟ್ಟಿಯನ್ವಯ ಘಟಕಗಳನ್ನು ನಿಲುಗಡೆ ಮಾಡಬೇಕಾದ ಸ್ಥಳವನ್ನು ನಿಗದಿಪಡಿಸಲಾಗುವುದು ಎಂದು ಹೇಳಿದರು.

ನಗರ ಶಾಸಕರಿಂದಲೂ ಚಾಲನೆ: ಇದಕ್ಕೂ ಮುನ್ನ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಏರ್ಪಡಿಸಿದ್ದ ಸಂಚಾರ ಆರೋಗ್ಯ ಘಟಕದ ವಾಹನಕ್ಕೆ ರಾಯಚೂರು ನಗರ ಶಾಸಕ ಡಾ.ಶಿವರಾಜ ಎಸ್.ಪಾಟೀಲ ಅವರು ತಮ್ಮ ಗೃಹಕಚೇರಿಯಲ್ಲಿ ಚಾಲನೆ ನೀಡಿದರು.

ರಾಯಚೂರು ವೃತ್ತದ 1ನೇ ಕಾರ್ಮಿಕ ನಿರೀಕ್ಷಕ ಮಹ್ಮದ್ ಉಮರ್ ಅಬ್ದುಲ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿ, ಕಾರ್ಮಿಕ ಇಲಾಖೆಯ ಸಿಬ್ಬಂದಿ ನಾಗರಾಜ, ಡಾ.ತನ್ವೀರ್, ಕೌಶಿಕ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.