ಸೋಮವಾರ, ನವೆಂಬರ್ 18, 2019
29 °C

ಮುಗಿಯದ ಭವನ ನಿರ್ಮಾಣ: ಜಾಲಹಳ್ಳಿಯಲ್ಲಿ ರಸ್ತೆತಡೆ ಮಾಡಿ ಪ್ರತಿಭಟನೆ

Published:
Updated:
Prajavani

ರಾಯಚೂರು: ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿಯಲ್ಲಿ ಎಂಟು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಮಹರ್ಷಿ ವಾಲ್ಮೀಕಿ ಭವನ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಾಲ್ಮೀಕಿ ಸಮಾಜದ ಜನರು ಸೋಮವಾರ ದಿಢೀರ್‌ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ತಿಂಥಿಣಿ ಬ್ರಿಡ್ಜ್‌–ದೇವದುರ್ಗ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ವಾಹನಗಳು ಎರಡು ಕಡೆಗೂ ನಿಂತುಕೊಂಡಿವೆ. ಪೊಲೀಸರು ಪ್ರತಿಭಟನಾಕಾರರ ಮನವೊಲಿಸುತ್ತಿದ್ದಾರೆ.

ಪ್ರತಿಕ್ರಿಯಿಸಿ (+)