ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಧನಕ್ಕೆ ವಿರೋಧ: ಪ್ರತಿಭಟನೆ ಇಂದು

Last Updated 6 ಜುಲೈ 2022, 4:01 IST
ಅಕ್ಷರ ಗಾತ್ರ

ಲಿಂಗಸುಗೂರು: ಬೇಡಜಂಗಮರ ಸತ್ಯಪ್ರತಿಪಾದನ ಹೋರಾಟದ ರೂವಾರಿ ಬಿ.ಡಿ ಹಿರೇಮಠ ನೇತೃತ್ವದ ಹೋರಾಟಗಾರರನ್ನು ಬಂಧಿಸಿರುವ ಸರ್ಕಾರದ ಕ್ರಮ ವಿರೋಧಿಸಿ ತಾಲ್ಲೂಕು ಕೇಂದ್ರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಜಂಗಮ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಭುಸ್ವಾಮಿ ಅತ್ನೂರು ತಿಳಿಸಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,‘ಅಖಿಲ ಭಾರತ ಬೇಡ ಜಂಗಮ ಒಕ್ಕೂಟದ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಸಮಾಜ ಕಲ್ಯಾಣ ಸಚಿವರು ನೀಡಿದ ಭರವಸೆ ಹುಸಿಯಾಗಿದೆ. ಅದನ್ನು ಪ್ರಶ್ನಿಸಲು ಮುಖ್ಯಮಂತ್ರಿ ಬಳಿ ತೆರಳುತ್ತಿದ್ದ ಬಿ.ಡಿ ಹಿರೇಮಠ ನೇತೃತ್ವದ ಹೋರಾಟಗಾರರ ಬಂಧನ ಖಂಡನೀಯ’ ಎಂದರು.

ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರು ನೀಡಿರುವ ಮೀಸಲು ಸೌಲಭ್ಯ, ವಿವಿಧ ನ್ಯಾಯಾಲಯಗಳ ಆದೇಶ, ಶತಮಾನದ ಹಿಂದಿನ ದಾಖಲೆ ಸಮೇತ ಸತ್ಯ ಪ್ರತಿಪಾದನ ಹೋರಾಟ ನಡೆಸುತ್ತಿದ್ದೇವೆ. ಇದನ್ನು ಸಹಿಸಲಾಗದ ಆಡಳಿತ ವ್ಯವಸ್ಥೆ ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಹೋರಾಟ ಹತ್ತಿಕ್ಕುವ ಯತ್ನ ನಡೆಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಬೇಡಜಂಗಮರ ನೇತಾರ ಬಿ.ಡಿ ಹಿರೇಮಠ ಮತ್ತು ಹೋರಾಟಗಾರರನ್ನು ಬಂಧಿಸಿದ ಕ್ರಮ ಖಂಡಿಸಿ ಜಂಗಮ ಸಮಾಜಕ್ಕೆ ನ್ಯಾಯ ಒದಗಿಸಲು ಒತ್ತಾಯಿಸಿ ಬುಧವಾರ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದೆ. ಕಾರಣ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಮುಖಂಡರಾದ ಶರಣಯ್ಯ ದಾಸೋಹಮಠ, ಅಮರೇಶ ಗಂಭೀರಮಠ, ಚೆನ್ನಬಸವ ಹಿರೇಮಠ, ಶರಣಬಸವ ಹಿರೇಮಠ, ಮಹಾದೇವಯ್ಯ ಗೌಡೂರು ಹಾಗೂ ಗಂಗಾಧರ ಶಾಸ್ತ್ರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT