ಭಾನುವಾರ, ಜನವರಿ 19, 2020
26 °C

ಕೇಂದ್ರದ ವಿರುದ್ಧ ಪ್ರತಿಭಟನೆ: ಎಸ್‌ಯುಸಿಐ ಕಾರ್ಯಕರ್ತರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ನಗರದ ತಿನ್‌ಕಂದಿಲ್‌ ವೃತ್ತದಲ್ಲಿ ಮುಖಕ್ಕೆ ಕಪ್ಪುಪಟ್ಟಿ ಕಟ್ಟಿಕೊಂಡು ಶನಿವಾರ ಪ್ರತಿಭಟನೆ ಆರಂಭಿಸಿದ್ದ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಘಟಕದ ಸದಸ್ಯರನ್ನು ಪೊಲೀಸರು ಬಂಧಿಸಿದರು.

ನಾಗರಿಕ ತಿದ್ದುಪಡಿ ಕಾಯ್ದೆ, ಅನಿವಾಸಿ ನಾಗರಿಕ ಕಾಯ್ದೆ, ಬೆಲೆ ಏರಿಕೆ ಹಾಗೂ ನಿರುದ್ಯೋಗ ವಿರುದ್ಧದ ಘೋಷವಾಕ್ಯಗಳ ಫಲಕ ಕೈಯಲ್ಲಿ ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದರು.

ಕೆಲವೆ ನಿಮಿಷಗಳಲ್ಲಿ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಕ್ಕೆ ಬಂದು, ಪ್ರತಿಭಟನಾಕಾರರನ್ನೆಲ್ಲ ಬಂಧಿಸಿ ಕರೆದೊಯ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು