‘ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಲಿ’

ರಾಯಚೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಹಾಗೂ ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಯ್ದೆ ಹಿಂಪಡೆಯಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಪ್ರತಿರೋಧ ಸಪ್ತಾಹದ ಅಂಗವಾಗಿ ರೈತ, ಕೃಷಿ ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಕೇಂದ್ರವು ಜಾರಿಗೆ ತರುವ ಕೃಷಿ ತಿದ್ದುಪಡಿ ಕಾಯ್ದೆ ಸೇರಿ ಮೂರು ತಿದ್ದುಪಡಿ ಕಾಯ್ದೆಗಳು ರೈತ ವಿರೋಧಿಯಾಗಿವೆ. ಕಾರ್ಪೋರೇಟ್ ಪರವಾಗಿದೆ. ಕಾಯ್ದೆಯನ್ನು ವಿರೋಧಿಸಿ ಏಳು ತಿಂಗಳುಗಳಿಂದ ದೆಹಲಿಯ ವಿವಿಧ ಗಡಿಯಲ್ಲಿ ಲಕ್ಷಾಂತರ ರೈತರು ಹೋರಾಟ ಮಾಡುತ್ತಿದ್ದರೂ ಕೇಂದ್ರ ಸರ್ಕಾರ ಹೋರಾಟಕ್ಕೆ ಸ್ಪಂದಿಸುತ್ತಿಲ್ಲ ಎಂದು ತಿಳಿಸಿದರು.
ಸರ್ಕಾರ ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಹೋರಾಟ ನಿರತ 600 ರೈತರು ಸಾವನ್ನಪ್ಪಿದ್ದು ಅವರ ಕುಟುಂಬ ದುಃಖದಲ್ಲಿದೆ. ಸರ್ಕಾರದ ಧೋರಣೆಯಿಂದ ಧೃತಿಗೆಡದೇ ಮತ್ತಷ್ಟು ಗಟ್ಟಿಯಾಗಿ ಹೋರಾಟ ಮುಂದುವರೆಸಿದ್ದಾರೆ.
ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆ ಜಾರಿಗೆ ಖಂಡಿಸಿ ದೆಹಲಿ ಮಾತ್ರವಲ್ಲದೇ ವಿವಿಧೆಡೆ ಹೋರಾಟ ಮಾಡಿದ್ದು, ಜಿಲ್ಲೆಯಲ್ಲಿ ನೂರಾರು ರೈತರಿಂದ ಸಹಿ ಸಂಗ್ರಹ ಮಾಡಲಾಗಿದೆ ಎಂದು ರೈತ ಕೃಷಿ ಕಾರ್ಮಿಕರ ಸಂಘಟನೆಯ ಜಿಲ್ಲಾ ಅಧ್ಯಕ್ಷ ಪ್ರಮೋದ ತಿಳಿಸಿದರು.
ಪ್ರತಿಭಟನೆಯಲ್ಲಿ ಮಲ್ಲನಗೌಡ, ಜಮಾಲುದ್ದೀನ್, ಮಹಮ್ಮದ್ ಅಲಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.